ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈಗಷ್ಟೇ ಆಟ ಶುರುವಾಗಿದೆ, ಉಗ್ರ ಸಂಘಟನೆಯಿಂದ ಜಮ್ಮು-ಕಾಶ್ಮೀರಕ್ಕೆ ಎಚ್ಚರಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 15: ಜಮ್ಮು ಕಾಶ್ಮೀರದಲ್ಲಿ ಆಟ ಈಗಷ್ಟೇ ಆರಂಭವಾಗಿದೆ ಎಂದು ಉಗ್ರ ಸಂಘಟನೆಯು ಎಚ್ಚರಿಕೆ ನೀಡಿದೆ.

ಭದ್ರತಾ ಸಂಸ್ಥೆಗಳು ಈ ಎಚ್ಚರಿಕೆ ಸಂದೇಶವನ್ನೊಳಗೊಂಡ ಪತ್ರವನ್ನು ಹತಾಶಗೊಂಡಿರುವ ಉಗ್ರರು ಗಮನಸೆಳೆಯಲು ಯತ್ನಿಸುತ್ತಿರುವುದಾಗಿ ಎಂದು ಹೇಳಿವೆ. ಪಾಕಿಸ್ತಾನದ ಬೆಂಬಲಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾ, ಟಿಆರ್ ಫ್ 2019 ರಲ್ಲಿ ಮೊದಲ ಬಾರಿಗೆ ಕಾಶ್ಮೀರದಲ್ಲಿ ಕಾಣಿಸಿಕೊಂಡಿತ್ತು.

ನನ್ನನ್ನು ಹತ್ಯೆ ಮಾಡಿದರೂ ಕಾಶ್ಮೀರ ಭಾರತದ ಭಾಗವಾಗಿಯೇ ಇರಲಿದೆ: ಫಾರೂಖ್ ಅಬ್ದುಲ್ಲಾನನ್ನನ್ನು ಹತ್ಯೆ ಮಾಡಿದರೂ ಕಾಶ್ಮೀರ ಭಾರತದ ಭಾಗವಾಗಿಯೇ ಇರಲಿದೆ: ಫಾರೂಖ್ ಅಬ್ದುಲ್ಲಾ

ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶವನ್ನು ರೆಸಿಸ್ಟೆನ್ಸ್ ಫ್ರಂಟ್ ನೀಡಿದೆ. ಟಿಆರ್‌ಎಫ್‌ನ ಉಗ್ರರನ್ನು ಬಂಧಿಸಲು ಎನ್ ಐಎ ಕೇಂದ್ರಾಡಳಿತ ಪ್ರದೇಶದ ಹಲವು ಭಾಗಗಳಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಇನ್ನೂ ತೀವ್ರವಾಗಿ, ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತೇವೆ ಎಂದು ರೆಸಿಸ್ಟೆನ್ಸ್ ಫ್ರಂಟ್ ಎಚ್ಚರಿಸಿದೆ.

ಪೂಂಚ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಯೊಬ್ಬರು ಸೇರಿದಂತೆ ಸೇನಾಪಡೆಯ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದಾರೆ.

Resistance Front Says, Game Has Just Begun In J&K, Warns New Terror Outfit

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರೊಬ್ಬರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಉಗ್ರರ ಸರಣಿ ಕೃತ್ಯಗಳು ಭೀತಿ ಮೂಡಿಸಿದೆ.

ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಸರ್ಕಾರಿ ಬಾಲಕರ ಪ್ರೌಢಶಾಲೆಯೊಳಗೆ ನುಗ್ಗಿದ ಉಗ್ರರು, ಪ್ರಿನ್ಸಿಪಾಲ್ ಮತ್ತು ಶಿಕ್ಷಕನನ್ನು ಸಮೀಪದಿಂದ ಗುಂಡು ಹಾರಿಸಿದ್ದಾರೆ. ಈ ದಾಳಿ ನಡೆದ ಸಂದರ್ಭದಲ್ಲಿ ಶಾಲೆಯಲ್ಲಿ ಯಾವ ಮಕ್ಕಳೂ ಇರಲಿಲ್ಲ ಮತ್ತು ಆನ್‌ಲೈನ್ ತರಗತಿಗಳು ನಡೆಯುತ್ತಿದ್ದವು.

ಶ್ರೀನಗರದಲ್ಲಿ ಮೂರು ಕಡೆ ಸರಣಿ ದಾಳಿಗಳನ್ನು ನಡೆಸಿದ್ದ ಉಗ್ರರು ಮೂವರನ್ನು ಹತ್ಯೆ ಮಾಡಿದ್ದರು. ಈ ಘೋರ ಘಟನೆ ನಡೆದು 48 ಗಂಟೆಗಳ ಒಳಗೆಯೇ ಮತ್ತೊಂದು ದಾಳಿ ನಡೆದಿದೆ. ಕಳೆದ ಐದು ದಿನಗಳಲ್ಲಿ ನಡೆದ ಭಯೋತ್ಪಾದನಾ ದಾಳಿಗಳಲ್ಲಿ ಏಳು ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ದಿ ರೆಸಿಸ್ಟ್ಯಾನ್ಸ್ ಫ್ರಂಟ್ (ಟಿಆರ್‌ಎಫ್) ಉಗ್ರ ಸಂಘಟನೆ ಈ ದಾಳಿಗಳ ಹಿಂದೆ ಇದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದರು.

ಪಿಸ್ತೂಲು ಹಿಡಿದು ಬೆಳಿಗ್ಗೆ ಶಾಲೆಗೆ ಬಂದ ದುಷ್ಕರ್ಮಿಗಳು ಅಲ್ಲಿದ್ದ ಶಿಕ್ಷಕರ ಗುರುತಿನ ಚೀಟಿಗಳನ್ನು ತೋರಿಸುವಂತೆ ಕೇಳಿದರು. ಬಳಿಕ ಅಲ್ಪಸಂಖ್ಯಾತ ಸಮುದಾಯಗಳ ಇಬ್ಬರು ಶಿಕ್ಷಕರ ಮೇಲೆ ಗುಂಡು ಹಾರಿಸಿದರು' ಎಂದು ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದರು.

ಟಿಆರ್‌ಎಫ್ ಸಂಘಟನೆಯನ್ನು ಪಾಕಿಸ್ತಾನದ ಕರಾಚಿಯಿಂದ ನಡೆಸಲಾಗುತ್ತಿದೆ. ಗಡಿಯಾಚೆಗಿನ ಈ ನಂಟನ್ನು ಶೀಘ್ರದಲ್ಲಿಯೇ ಬಹಿರಂಗಪಡಿಸಲಿದ್ದೇವೆ. ಬಲಿಯಾದವರು ಯಾವುದೇ ಸಂಘಟನೆಗಳಿಗೆ ಸೇರಿದವರಲ್ಲ.

ಬಲಿಯಾದ ಮಖನ್ ಲಾಲ್ ಬಿಂದ್ರೂ ಅವರು ಆರ್‌ಎಸ್‌ಎಸ್‌ ಸಂಘಟನೆಗೆ ಸೇರಿದವರು ಎಂದು ನಂಬಿಸುತ್ತಿರುವುದು ಟಿಆರ್‌ಎಫ್‌ನ ತಂತ್ರವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಈ ಘಟನೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕಾಶ್ಮೀರದಲ್ಲಿನ ಸಾಮಾನ್ಯ ನಾಗರಿಕರು ಮತ್ತು ಸೈನಿಕರ ಸುರಕ್ಷತೆ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. 370ನೇ ವಿಧಿ ರದ್ದತಿ ಬಳಿಕ ಕಾಶ್ಮೀರದಲ್ಲಿ ಶಾಂತಿ ಉಂಟಾಗುತ್ತದೆ, ಭಯತ್ಪಾದನಾ ದಾಳಿ ಕಡಿಮೆಯಾಗಿದೆ ಎಂದು ಬಿಜೆಪಿ ಬಿಂಬಿಸುತ್ತಿತ್ತು.

ಆದರೆ ಇಲ್ಲಿ ಜನಸಾಮಾನ್ಯರ ಸುರಕ್ಷತೆಗೆ ಅಪಾಯ ಹೆಚ್ಚುತ್ತಿದೆ ಎಂದು ಅನೇಕರು ಆರೋಪಿಸಿದ್ದಾರೆ. ಆದರೆ ಇದೀಗ ಉಗ್ರ ಸಂಘಟನೆಯ ಹೇಳಿಕೆ ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.

ಹತಾಶಗೊಂಡಿರುವ ಉಗ್ರರು ಈ ಎಚ್ಚರಿಕೆ ಸಂದೇಶವನ್ನೊಳಗೊಂಡ ಪತ್ರದಿಂದ ಗಮನಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಭದ್ರತಾ ಸಂಸ್ಥೆಗಳು ಹೇಳಿವೆ. ಪಾಕಿಸ್ತಾನದ ಬೆಂಬಲಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾ, ಟಿಆರ್ ಫ್ 2019 ರಲ್ಲಿ ಮೊದಲ ಬಾರಿಗೆ ಕಾಶ್ಮೀರದಲ್ಲಿ ಕಾಣಿಸಿಕೊಂಡಿತ್ತು.

English summary
The Resistance Front, which came in limelight for the recent spate of civilian killings in Jammu and Kashmir, on Thursday issued a fresh threat that it would “strike” aggressively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X