ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಿಲಾನಿ ಆರೋಗ್ಯದ ಬಗ್ಗೆ ವದಂತಿ: ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತ

|
Google Oneindia Kannada News

ಜಮ್ಮು ಮತ್ತು ಕಾಶ್ಮೀರ, ಫೆಬ್ರವರಿ 13: ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ಆರೋಗ್ಯದ ಕುರಿತು ವದಂತಿ ಹಬ್ಬಿರುವ ಕಾರಣ ಕಾಶ್ಮೀರದಲ್ಲಿ ಮೊಬೈಲ್ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ಗಿಲಾನಿ ಆರೋಗ್ಯ ಸ್ಥಿತಿ ಕುರಿತು ವದಂತಿ ಹರಡದಂತೆ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ.90 ವರ್ಷದ ಗಿಲಾನಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲೇ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿದ್ದಾರೆ.

ಅದೇ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ಆದಾಗ್ಯೂ ಗಿಲಾನಿಯವರು ಕೆಲ ಕಾಲ ಆನಾರೋಗ್ಯದಿಂದಿದ್ದರು.

Rumours Surrounding Geelanis Health Internet Services Stopped In Kashmir

ಆದರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬ ತಿಳಿಸಿದೆ. ಅವರಿಗೆ ಅನಾರೋಗ್ಯವಾಗಿದ್ದು ಸತ್ಯ ಆದರೆ ಈಗ ಆರೋಗ್ಯ ಸ್ಥಿರವಾಗಿ ಚಿಕಿತ್ಸೆ ಮುಂದುವರೆದಿದೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

English summary
Mobile internet services have been suspended in Kashmir to prevent rumors about the health of separatist leader Syed Ali Shah Geelani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X