ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ 2 ಗಂಟೆಯಲ್ಲಿ ಇಬ್ಬರು ಸ್ಥಳೀಯರಲ್ಲದ ನಾಗರಿಕರ ಮೇಲೆ ಗುಂಡಿನ ದಾಳಿ

|
Google Oneindia Kannada News

ಪುಲ್ವಾಮಾ, ಮಾರ್ಚ್ 21: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗಂಗೂ ಪ್ರದೇಶದಲ್ಲಿ ಅಪರಿಚಿತ ಬಂದೂಕು ಧಾರಿಯೊಬ್ಬರು ನಡೆಸಿದ ಗುಂಡಿನ ದಾಳಿಯಲ್ಲಿ ಸ್ಥಳೀಯರಲ್ಲದ ಕಾರ್ಮಿಕನೊಬ್ಬ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪುಲ್ವಾಮಾದ ಗಂಗೂ ಪ್ರದೇಶದಲ್ಲಿ ಸ್ಥಳೀಯರಲ್ಲದ ಕಾರ್ಮಿಕನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಲ್ವಾಮಾ ದಾಳಿ; ಹುತಾತ್ಮ ಗುರು ಸಮಾಧಿಗೆ ಪ್ರತ್ಯೇಕ ಪೂಜೆ
ಇನ್ನು, ಬಂದೂಕುಧಾರಿ ನಡೆಸಿದ ದಾಳಿಯಿಂದ ಗಾಯಗೊಂಡ ಕಾರ್ಮಿಕನನ್ನು ಪರಸ್ ಮಂಡನ್ ಅವರ ಪುತ್ರ ಬಿಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಿಸುಜಿತ್ ಕುಮಾರ್ ಮೂಲತಃ ಬಿಹಾರದ ನಿವಾಸಿ ಎಂದು ಗೊತ್ತಾಗಿದೆ.

Second militant attack in last two hours at Pulwama; Non-local labour injured

ಗಂಗೂ ಪ್ರದೇಶವನ್ನು ಸುತ್ತುವರಿದ ಭದ್ರತಾ ಸಿಬ್ಬಂದಿ:
ಜಮ್ಮು ಕಾಶ್ಮೀರ ಪುಲ್ವಾಮಾ ಜಿಲ್ಲೆಯ ಗಂಗೂ ಎಂಬ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದ ಘಟನೆಯ ಬೆನ್ನಲ್ಲೇ ಭದ್ರತಾ ಸಿಬ್ಬಂದಿ ಅಲರ್ಟ್ ಆಗಿದ್ದಾರೆ. ಗಂಗೂ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಈಗಾಗಲೇ ಸುತ್ತುವರಿದಿದ್ದು, ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಗಂಟೆಯಲ್ಲಿ 2ನೇ ಗುಂಡಿನ ದಾಳಿ:
ಕಾಶ್ಮೀರದಲ್ಲಿ ಕಳೆದ 2 ಗಂಟೆಯಲ್ಲೇ ಎರಡು ಬಾರಿ ಗುಂಡಿನ ದಾಳಿ ನಡೆದ ಘಟನೆ ವರದಿಯಾಗಿದೆ. ಪುಲ್ವಾಮಾ ಜಿಲ್ಲೆಯ ಗಂಗೂ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಯುವುದಕ್ಕೂ ಪೂರ್ವದಲ್ಲಿ ಮಧ್ಯ ಕಾಶ್ಮೀರದ ಬುದ್ಗಾಮ್‌ನ ಗೊಟ್‌ಪೋರಾ ಗ್ರಾಮದ ತನ್ನ ಮನೆಯ ಸಮೀಪ ತಾಹಿರ್ ಮೊಹಿಯುದಿನ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಯಿತು. ಈ ವ್ಯಕ್ತಿಯು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.

English summary
Second militant attack in last two hours at Pulwama; Non-local labour injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X