ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಕ್ಷನ್ 144 ಜಾರಿ: ಸ್ತಬ್ಧಗೊಂಡ ಕಣಿವೆ ರಾಜ್ಯ

ಶ್ರೀನಗರ, ಆಗಸ್ಟ್ 5:ಕಣಿವೆ ರಾಜ್ಯದಲ್ಲಿ ಗೊಂದಲ ಹಾಗೂ ಆತಂಕ ಮುಂದುವರೆದ ಬೆನ್ನಲ್ಲೇ ಇಂದು ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗುವಂತೆ ಶ್ರೀನಗರ ಜಮ್ಮು ಸೇರಿ ರಾಜ್ಯಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ.

ಕಾಶ್ಮೀರದ ವಿಶೇಷ ಸ್ಥಾನಮಾನ, ರಾಜ್ಯದ ತ್ರಿ ವಿಭಜನೆ ಸೇರಿ ಇತರೆ ವಿಚಾರಗಳ ಮೇಲೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂಬ ಸಂದೇಹಗಳ ಮಧ್ಯೆಯೇ ಈ ಆದೇಶವಾಗಿದೆ.

ಹಾಗೆಯೇ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಗಸ್ಟ್ 5-10ರವರೆಗೆ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

Section 144 Imposed on Jammu and Kashmir

ಹಾಗೆಯೇ ರಾಜ್ಯಾದ್ಯಂತ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತ್ಯೇಕತಾವಾದಿಗಳ ಸಾವು ಸೇರಿ ಇತರೆ ವಿಚಾರಗಳ ಬಗ್ಗೆ ಕಣಿವೆ ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿರುವ ಬೆನ್ನಲ್ಲೇ ಈ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಮಾತೂ ಹಬ್ಬುತ್ತಿದೆ.

ಸಾಮಾನ್ಯವಾಗಿ ಬುಧವಾರ ಅಥವಾ ಗುರುವಾರ ನಡೆಯಬೇಕಿದ್ದ, ಕೇಂದ್ರ ಸಚಿವ ಸಂಪುಟ ಸಭೆ ಇಂದು ಸಂಸತ್ ಭವನದಲ್ಲಿ ನಡೆಯುತ್ತಿದೆ.ಕಾಶ್ಮೀರ ವಿಚಾರದ ಬಗ್ಗೆ ಈ ಸಭೆಯಲ್ಲಿ ಏನಾದರೂ ತೀರ್ಮಾನ ಮಾಡಬಹುದೇನೋ ಎಂಬ ಸಂದೇಹಗಳು ವ್ಯಕ್ತವಾಗುತ್ತಿದೆ.

ಆದರೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಏನು ಸ್ಪಷ್ಟನೆ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+