• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಲ್ಗಾಮ್ ನಲ್ಲಿ ಮೂವರು ಉಗ್ರರ ಹತ್ಯೆ, ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ

|

ಶ್ರೀನಗರ್ (ಜಮ್ಮು ಮತ್ತು ಕಾಶ್ಮೀರ), ಫೆಬ್ರವರಿ 24: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಉಗ್ರಗಾಮಿಗಳು ಹಾಗೂ ಭದ್ರತಾ ಪಡೆಯ ಮಧ್ಯದ ಕಾದಾಟದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮರಾಗಿ, ಮೂವರು ಸೈನಿಕರು ಗಾಯಗೊಂಡಿದ್ದಾರೆ. ಸೇನೆ, ಸಿಆರ್ ಪಿಎಫ್ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮುಂದುವರಿದಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಕಾಶ್ಮೀರದಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

ಶ್ರೀನಗರ್ ನಿಂದ ಅರವತ್ತೆಂಟು ಕಿಲೋಮೀಟರ್ ದೂರದಲ್ಲಿ ಇರುವ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ತುರಿಗಾಂ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಯೋಧರ ಪೈಕಿ ಮೇಜರ್ ವೊಬ್ಬರಿದ್ದಾರೆ.

ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಅಮನ್ ಕುಮಾರ್ ಹುತಾತ್ಮರಾಗಿದ್ದಾರೆ. ಅವರು 2011ನೇ ಬ್ಯಾಚ್ ನ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸೇವೆಯವರು. ಎರಡು ವರ್ಷದ ಹಿಂದಷ್ಟೇ ಕುಲ್ಗಾಂಗೆ ಪೋಸ್ಟಿಂಗ್ ಆಗಿದ್ದರು. ಈಚೆಗೆ ಆತ್ಮಾಹುತಿ ದಾಳಿ ನಡೆದ ಪುಲ್ವಾಮಾದಿಂದ ಕುಲ್ಗಾಮ್ ಗೆ ನಲವತ್ತೇಳು ಕಿಲೋಮೀಟರ್ ಮಾತ್ರ ದೂರ. ಆ ದಾಳಿಯ ಹೊಣೆಯನ್ನು ಜೈಶ್ ಇ ಮೊಹ್ಮದ್ ಸಂಘಟನೆ ಹೊತ್ತಿಕೊಂಡಿದೆ.

English summary
A senior police officer was killed and three soldiers injured in an encounter between terrorists and security forces in Jammu and Kashmir's Kulgam district. Three terrorists were killed in the ongoing joint operation by the army, the CRPF and the police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X