ಜಮ್ಮು ಕಾಶ್ಮೀರ; ಎನ್‌ಕೌಂಟರ್‌ನಲ್ಲಿ ಏಳು ಉಗ್ರರ ಹತ್ಯೆ
ಶ್ರೀನಗರ, ಏಪ್ರಿಲ್ 9: ಜಮ್ಮು ಕಾಶ್ಮೀರದ ಶೋಪಿಯಾನ್ ಹಾಗೂ ಪುಲ್ವಾಮಾ ಜಿಲ್ಲೆಯಲ್ಲಿ ನಡೆಸಿದ ಎರಡು ಎನ್‌ಕೌಂಟರ್‌ನಲ್ಲಿ ಭಯೋತ್ಪಾದನಾ ಸಂಘಟನೆ ಅನ್ಸಾರ್ ಘಜ್ವಾತುಲ್ ಹಿಂದ್ ಮುಖ್ಯಸ್ಥ ಇಮ್ತಿಯಾಜ್ ಅಹ್ಮದ್ ಶಾ ಒಳಗೊಂಡಂತೆ ಏಳು ಮಂದಿ ಉಗ್ರರನ್ನು ಹೊಡೆದುರುಳಿಸಿರುವುದಾಗಿ ತಿಳಿದುಬಂದಿದೆ.

ಶೋಪಿಯಾನ್ ಪಟ್ಟಣದಲ್ಲಿ ಗುರುವಾರ ಸಂಜೆ ಭದ್ರತಾ ಪಡೆ ಎನ್‌ಕೌಂಟರ್ ನಡೆಸಿದ್ದು, ಐದು ಉಗ್ರರನ್ನು ಹತ್ಯೆ ಮಾಡಿತ್ತು. ಶುಕ್ರವಾರ ಇನ್ನಿಬ್ಬರನ್ನು ತ್ರಾಲ್ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಶೋಪಿಯಾನ್‌ನಲ್ಲಿ ಮಸೀದಿಯೊಳಗೆ ಭಯೋತ್ಪಾದಕರಿಬ್ಬರು ಅಡಗಿ ಕುಳಿತಿದ್ದು, ಅವರನ್ನು ಶರಣಾಗತಿ ಮಾಡುವ ಪ್ರಯತ್ನವನ್ನೂ ನಡೆಸಲಾಯಿತು. ಅವರು ಕೂಡ ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆ ಸಿಬ್ಬಂದಿಆ ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.












Click it and Unblock the Notifications