• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಪಿಯನ್‌ನಲ್ಲಿ ಜೈಷ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿದ ಭಾರತೀಯ ಸೇನೆ

|

ಜಮ್ಮು/ಕಾಶ್ಮೀರ, ಜುಲೈ 27: ಜೈಷ್ -ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಹೊಡೆದುರುಳಿಸಿದೆ.

ಶಾಪಿಯಾನ್‌ನಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.ದಕ್ಷಿಣ ಕಾಶ್ಮೀರದ ಬೋನ್‌ಬಜಾರ್‌ನಲ್ಲಿ ಉಗ್ರರು ಅಡಗಿರುವ ಮಾಹಿತಿ ಪಡೆದು ತಂಡವು ತೆರಳಿತ್ತು. ಉಗ್ರರು ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದೇ ಸಂದರ್ಭದಲ್ಲಿ ಪ್ರತಿದಾಳಿ ನಡೆಸಿದ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.

ಸತ್ಯ ಒಪ್ಪಿಕೊಂಡ ಇಮ್ರಾನ್ ಖಾನ್, ಎಚ್ಚರಿಕೆ ನೀಡಿದ ಭಾರತಸತ್ಯ ಒಪ್ಪಿಕೊಂಡ ಇಮ್ರಾನ್ ಖಾನ್, ಎಚ್ಚರಿಕೆ ನೀಡಿದ ಭಾರತ

ಕಳೆದ ಐದು ವರ್ಷಗಳಲ್ಲಿ 960 ಉಗ್ರರನ್ನು ಜಮ್ಮು ಕಾಶ್ಮೀರದಲ್ಲಿ ಕೊಲೆ ಮಾಡಲಾಗಿದೆ. ಈ ಕುರಿತು ಲೋಕಸಭೆಯಲ್ಲಿ ಕೇಂದ್ರ ಸಚಿವ ಗಿ ಕಿಶನ್ ರೆಡ್ಡಿ ಮಾಹಿತಿ ನೀಡಿದ್ದರು.

ಭದ್ರತಾ ಪಡೆಗಳ ದೃಢವಾದ ತಂತ್ರಗಳು ಮತ್ತು ಸುಸಂಬದ್ಧ ಪ್ರಯತ್ನಗಳ ಫಲವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿ 2019 ಮತ್ತು ಜುಲೈ 14, 2019 ರ ನಡುವೆ 126 ಉಗ್ರರು ಹತರಾಗಿದ್ದಾರೆ. ಈ ಕ್ರಮದಲ್ಲಿ, ನಮ್ಮ ಭದ್ರತಾ ಪಡೆಗಳ 75 ಸೈನಿಕರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಈ ಹುತಾತ್ಮರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ಭದ್ರತಾ ಪಡೆ ಸಿಬ್ಬಂದಿಗಳೂ ಸೇರಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಗೃಹ ಸಚಿವ ಕಿಶನ್ ರೆಡ್ಡಿ, ಭಯೋತ್ಪಾದಕ ಸಂಘಟನೆಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಭದ್ರತಾ ಸಾಧನಗಳನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಇದಲ್ಲದೆ, ರಾಷ್ಟ್ರ ವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುತ್ತಿಗೆ ಮತ್ತು ಶೋಧ ಕಾರ್ಯಾಚರಣೆಯನ್ನು ಬಲಪಡಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

English summary
Shopian Encounter 2 Terrorists Killed, T an encounter with security forces in Shopian district in Jammu and Kashmir this morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X