ಪುಲ್ವಾಮಾ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ, ಯೋಧ ಹುತಾತ್ಮ
ಶ್ರೀನಗರ, ಆಗಸ್ಟ್ 12: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಎನ್‌ಕೌಂಟರ್ ನಡೆಸಿದೆ.ಪುಲ್ವಾಮದ ಕಮ್ರಾಜಿಪೋರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

ಸೇನಾಪಡೆಗಳು ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎನ್ಕೌಂಟರ್ ನಡೆಸಲು ಆರಂಭಿಸಿದ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಒಂದು ದಿನಗಳ ಹಿಂದಷ್ಟೇ ಹಿಜ್ಬುಲ್ ಸಂಘಟನೆಯ ಐವರು ಉಗ್ರರನ್ನು ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಯೋಧರು ಸೇರಿ ಬಂಧಿಸಿದ್ದರು. ಹಾಗೆಯೇ ಅವರ ಬಳಿಕ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.












Click it and Unblock the Notifications