ಶ್ರೀನಗರ; ಕೋವಿಡ್ - 19 ರೋಗಿಗೆ ಚಿಕಿತ್ಸೆ ನೀಡುತ್ತಿದ್ದ 4 ವೈದ್ಯರಿಗೆ ಸೋಂಕು

ಶ್ರೀನಗರ, ಮೇ 18 : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಐವರು ವೈದ್ಯರಿಗೆ ಕೊರೊನಾ ಸೋಂಕು ತಗುಲಿದೆ. ಶ್ರೀನಗರದಲ್ಲಿ ಇದುವರೆಗೂ 156 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಸೋಮವಾರ ಶ್ರೀನಗರದ ಆಸ್ಪತ್ರೆಯ ಐವರು ಉದ್ಯೋಗಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಇವರಲ್ಲಿ ನಾಲ್ವರು ವೈದ್ಯರು ಒಬ್ಬ ಕೋವಿಡ್ - 19 ರೋಗಿಗೆ ಚಿಕಿತ್ಸೆ ನೀಡುತ್ತಿದ್ದರು ಎಂದು ಆಸ್ಪತ್ರೆ ಹೇಳಿದೆ.

ಆಸ್ಪತ್ರೆಯ ಹೃದಯ ವಿಭಾಗದ ಮುಖ್ಯಸ್ಥ ಡಾ. ನವೀದ್ ಶಾ ಐವರು ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ರೋಗಿಯ ಮೂಲಕವೇ ನಾಲ್ವರಿಗೆ ಸೋಂಕು ಹರಡಿದೆ ಎಂದು ಹೇಳಿದ್ದಾರೆ.

Srinagar 5 Doctors Tested Positive For COVID 19

ಜಮ್ಮು ಮತ್ತು ಕಾಶ್ಮೀರದಲ್ಲಿ ಇದುವರೆಗೂ 1183 ಕೊರೊನಾ ಪ್ರಕರಣಗಳು ದಾಖಲಾಗಿವೆ. 13 ಜನರು ಮೃತಪಟ್ಟಿದ್ದಾರೆ. ಇನ್ನೂ 595 ಪ್ರಕರಣಗಳು ಸಕ್ರಿಯವಾಗಿವೆ. ಶ್ರೀನಗರದಲ್ಲಿ 156 ಪ್ರಕರಣ ದಾಖಲಾಗಿದ್ದು, 5 ಜನರು ಮೃತಪಟ್ಟಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸಲು ಹೋರಾಟ ಮಾಡುತ್ತಿರುವ ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿಗಳಿಗೆ ಕೊರೊನಾ ವಾರಿಯರ್ಸ್ ಎಂದು ಹೇಳಲಾಗುತ್ತಿದೆ. ರೋಗಿಗೆ ಚಿಕಿತ್ಸೆ ನೀಡುವಾಗ ವೈದ್ಯರು ಪಿಪಿಇ ಕಿಟ್ ಧರಿಸಿರುತ್ತಾರೆ.

ಕೊರೊನಾ ಭೀತಿ ಹೆಚ್ಚಾಗಿರುವ ಕಾರಣ ಪಿಪಿಇ ಕಿಟ್‌ಗೆ ಬೇಡಿಕೆ ಹೆಚ್ಚಿದೆ. ದೇಶದಲ್ಲಿಯೇ ಈಗ ಪಿಪಿಇ ಕಿಟ್‌ಗಳನ್ನು ತಯಾರು ಮಾಡಿ ಕೊರೊನಾ ವಾರಿಯರ್ಸ್‌ಗೆ ನೀಡಲಾಗುತ್ತಿದೆ. ಆದರೆ, ಬೇಡಿಕೆ ಇರುವಷ್ಟು ಕಿಟ್ ಪೂರೈಕೆ ಆಗುತ್ತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+