ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ

|
Google Oneindia Kannada News

ಶ್ರೀನಗರ್, ಜನವರಿ 1: ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ದೇವಸ್ಥಾನದಲ್ಲಿ ನಡೆದಿರುವ ಕಾಲ್ತುಳಿತಕ್ಕೆ 12 ಮಂದಿ ಯಾತ್ರಾರ್ಥಿಗಳು ಪ್ರಾಣ ಬಿಟ್ಟಿದ್ದು, 14ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿರುವ ಘಟನೆ ನಡೆದಿದೆ.

ಹೊಸ ವರ್ಷದಂದು ಮಾತಾ ವೈಷ್ಣೋದೇವಿ ದೇವಸ್ಥಾನದ ಆವರಣಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳ ನೆರೆದಿದ್ದರು. ಈ ವೇಳೆ ನೂಕುನುಗ್ಗಲಿನ ನಡುವೆ "ಕೆಲವು ಯುವಕರ ನಡುವಿನ ಸಣ್ಣ ವಾಗ್ವಾದ" ದಿಂದ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ "ವೈಯಕ್ತಿಕವಾಗಿ ನಿಗಾ ವಹಿಸುತ್ತಿದ್ದು, ದುರಂತ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ," ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಸಚಿವರೊಬ್ಬರು ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ; 12 ಸಾವು, 14 ಜನಕ್ಕೆ ಗಾಯಜಮ್ಮು- ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ; 12 ಸಾವು, 14 ಜನಕ್ಕೆ ಗಾಯ

ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಥವಾ ಎಡಿಜಿಪಿ ಮುಖೇಶ್ ಸಿಂಗ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ

ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.

"ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕೆಲ ಯುವಕರ ನಡುವಿನ ಸಣ್ಣ ಜಗಳ ಕಾಲ್ತುಳಿತಕ್ಕೆ ಕಾರಣವಾಯಿತು. ಇದರಲ್ಲಿ 12 ಜನರು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ ಎಂದು ಘಟನಾ ಸ್ಥಳದ ಪ್ರಾಥಮಿಕ ಮಾಹಿತಿಯು ಸೂಚಿಸುತ್ತದೆ," ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. "ಪೊಲೀಸರು ಮತ್ತು ನಾಗರಿಕ ಆಡಳಿತದ ಅಧಿಕಾರಿಗಳು ತಕ್ಷಣ ಪರಿಸ್ಥಿತಿ ನಿಯಂತ್ರಿಸುವುದಕ್ಕೆ ಮುಂದಾದರು, ಆದರೆ ಅಷ್ಟರಷ್ಟೇ ಘಟನೆ ನಡೆದು ಹೋಯಿತು ಎಂದು ತಿಳಿಸಿದರು.

ಪ್ರಧಾನಿ ಮೋದಿ ಸಂತಾಪ

ಪ್ರಧಾನಿ ಮೋದಿ ಸಂತಾಪ

ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಭವನದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಈ ಪರಿಹಾರವನ್ನು ನೀಡಲಾಗುವುದು. ಇನ್ನು ಗಾಯಗೊಂಡವರ ಕುಟುಂಬಕ್ಕೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಹೆಲ್ಪ್ ಲೈನ್ ಹಂಚಿಕೊಂಡ ಲೆಪ್ಟಿನೆಂಟ್ ಗವರ್ನರ್

ಹೆಲ್ಪ್ ಲೈನ್ ಹಂಚಿಕೊಂಡ ಲೆಪ್ಟಿನೆಂಟ್ ಗವರ್ನರ್

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಂಡಿದ್ದಾರೆ.

ಶ್ರೀ ಮಾತಾ ವೈಷ್ಣೋ ದೇವಿ ಶ್ರೈನ್ ಬೋರ್ಡ್ ಸಹಾಯವಾಣಿ ಸಂಖ್ಯೆ:

01991-234804

01991-234053

ಇತರೆ ಸಹಾಯವಾಣಿ ಸಂಖ್ಯೆಗಳು:

ಪಿಸಿಆರ್ ಕತ್ರಾ 01991232010/ 9419145182

ಪಿಸಿಆರ್ ರಿಯಾಸಿ 0199145076/ 9622856295

ಡಿಸಿ ಕಚೇರಿ ರಿಯಾಸಿ ನಿಯಂತ್ರಣ ಕೊಠಡಿ

01991245763/ 9419839557

10 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

10 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

"ನಾನು ಪ್ರಧಾನಿಯೊಂದಿಗೆ ಮಾತನಾಡಿದ್ದು, ಘಟನೆಯ ಬಗ್ಗೆ ಅವರಿಗೆ ವಿವರಿಸಿದ್ದೇನೆ," ಎಂದು ಜಮ್ಮು ಕಾಶ್ಮೀರ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ Rs10 ಲಕ್ಷ ಹಾಗೂ ಗಾಯಗೊಂಡಿದ್ದು, 2 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ದೇಗುಲ ಮಂಡಳಿಯೇ ಭರಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.

English summary
Rs.10 lakh Compensation each would be given to kin of those who lost their lives due to Stampede At Mata Vaishno Devi Temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X