ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮೆಹಬೂಬಾ

ಶ್ರೀನಗರ, ಫೆ 26: ಬಾಲ್ಕೋಟ್, ಮುಜಫರಾಬಾದ್ ಮತ್ತು ಚಕೋಟಿಯ ಉಗ್ರರ ತರಬೇತಿ ಶಿಬಿರ ಮತ್ತು ಲಾಂಚ್ ಪ್ಯಾಡ್ ಮೇಲೆ ದಾಳಿ ನಡೆದು ಇನ್ನು ಹತ್ತು ಗಂಟೆ ಕೂಡಾ ಕಳೆದಿಲ್ಲ, ಆಗಲೇ, ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಸಂಶಯ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ನಡೆದ ಸರ್ಜಿಕಲ್ ಸ್ಟ್ರೈಕ್ (ಸೆ. 2016) ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ದ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನರಿತ ರಾಹುಲ್ ಗಾಂಧಿ ಈ ಬಾರಿ ಎಚ್ಚರಿಕೆಯ ಹೇಳಿಕೆಯನ್ನು ನೀಡಿದ್ದು, ಭಾರತೀಯ ವಾಯುಪಡೆಯ ಪೈಲಟ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ, ಸೇನಾ ದಾಳಿಯ ಬಗ್ಗೆ ಮೆಹಬೂಬಾ, ಸಂಶಯ ವ್ಯಕ್ತ ಪಡಿಸಿ ಟ್ವೀಟ್ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

Surgical strike 2: Former Jammu and Kashmi CM Mehabooba Mufti tweet

ಮೆಹಬೂಬಾ ಮಾಡಿರುವ ಟ್ವೀಟ್ ನಲ್ಲಿ, ' ಭಾರತೀಯ ವಾಯುಸೇನೆ ದಾಳಿ ನಡೆಸಿರುವ ಬಗ್ಗೆ ವರದಿಗಳು ಬರುತ್ತಿವೆ. ಉಗ್ರರ ಕ್ಯಾಂಪಿನ ಮೇಲೆ ಬಾಂಬ್ ದಾಳಿ ಮಾಡಲಾಗಿದೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಹೇಳಿಕೊಳ್ಳುತ್ತಿದ್ದಾರೆ.

ಆದರೆ, ಪಾಕಿಸ್ತಾನ ಇದನ್ನು ನಿರಾಕರಿಸುತ್ತಿದೆ. ಭಾರತದ ವಿಮಾನಗಳನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಹೇಳುತ್ತಿದೆ. ಎರಡೂ ದೇಶಗಳ ವಸ್ತುನಿಷ್ಠ ಹೇಳಿಕೆಯನ್ನು ಗಮನಿಸಬೇಕಾಗಿದೆ' ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ, ಸೇನಾ ದಾಳಿಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದಾರೆ.

ಮೆಹಬೂಬಾ ಟ್ವೀಟಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ನಿಮ್ಮಂತವರು ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದು ನಮ್ಮ ದುರ್ದೈವ.. ಮುಂತಾದ ಟೀಕೆಗಳು ವ್ಯಕ್ತವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+