ಜಮ್ಮು ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟ,ಸೇನಾ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರ, ಜನವರಿ 7: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿದ್ದು, ಭಾರತೀಯ ಸೇನಾ ಪಡೆಗಳು ಕಾರ್ಯಾಚರಣೆಗಿಳಿದಿವೆ.
ಜಮ್ಮು ಮತ್ತು ಕಾಶ್ಮೀರದ ಸಾಂಭಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿದೆ.
ಅನುಮಾನಾಸ್ಪದ ಓಡಾಟಗಳು ಕಂಡಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಇಂದಲೇ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ. ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ ಸಮೀಪವಿರುವ ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ಶಂಕಿತ ವ್ಯಕ್ತಿಗಳು ಓಡಾಡುತ್ತಿರುವ ದೃಶ್ಯ ಕಂಡುಬಂದಿತ್ತು. ಈ ವೇಳೆ ಸೇನಾಪಡೆಗಳು ಕೆಲ ಸುತ್ತು ಗುಂಡುಗಳನ್ನು ಕೂಡ ಹಾರಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications