• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮುವಿನಲ್ಲಿ ಉಗ್ರರ ದಾಳಿ; ಇಬ್ಬರು ಯೋಧರು ಹುತಾತ್ಮ

|

ಶ್ರೀನಗರ, ಜನವರಿ 01: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾದರು.

ಬುಧವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಉಗ್ರರು ದಾಳಿ ನಡೆಸಿದರು. ಯೋಧರ ಕ್ಯಾಂಪ್‌ಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ.

ಭಾರೀ ಸೇನಾ ದಾಳಿ; 80 ಮಾಲಿ ಉಗ್ರರು ಮಟಾಶ್

ಮೂವರು ಉಗ್ರರು ಈ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಉಗ್ರರ ಜೊತೆಗಿನ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಬೇರೂರಿರುವ ಬಾಂಗ್ಲಾ ಉಗ್ರರು

ಉಗ್ರರು ಅಡಗಿ ಕುಳಿತಿದ್ದು, ಯೋಧರ ಜೊತೆ ಗುಂಡಿನ ಚಕಮಕಿ ಮುಂದುವರೆದಿದೆ.

ಗಡಿಯಲ್ಲಿ 25 ಕಳ್ಳದಾರಿ: ನಾಗರಿಕರ ವೇಷದಲ್ಲಿ ಭಯೋತ್ಪಾದಕರು

ಅಧಿಕಾರ ಸ್ವೀಕಾರ : ಜನರಲ್ ಬಿಪಿನ್ ರಾವತ್ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಅವರು ಭೂ ಸೇನಾ ಮುಖ್ಯಸ್ಥ ಹುದ್ದೆಯಿಂದ ನಿವೃತ್ತರಾಗಿದ್ದರು.

ಕೇಂದ್ರ ಸರ್ಕಾರ ಬಿಪಿನ್ ರಾವತ್‌ರನ್ನು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಆಗಿ ನೇಮಕ ಮಾಡಿತ್ತು. ಭಾರತದ ಮೊದಲ ಸಿಡಿಎಸ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಡಿಸೆಂಬರ್ 31ರಿಂದ ಜಾರಿಗೆ ಬರುವಂತೆ ರಾವತ್‌ರನ್ನು ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. 1978 ಡಿಸೆಂಬರ್‌ನಲ್ಲಿ ರಾವತ್ ಸೇನೆಗೆ ಸೇರ್ಪಡೆಯಾಗಿದ್ದರು. 2017ರ ಜನವರಿ 1 ರಿಂದ ಅವರು ಸೇನಾ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

English summary
Two soldier martyred in Nowshera on January 1, 2020 after terrorist attack. Nowshera is a town in Union Territory of Jammu and Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X