ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರರಿಂದ ಆರೆಸ್ಸೆಸ್ ಮುಖಂಡನ ಮೇಲೆ ದಾಳಿ, ಭದ್ರತಾ ಸಿಬ್ಬಂದಿ ಹತ್ಯೆ

|
Google Oneindia Kannada News

ಶ್ರೀನಗರ, ಏಪ್ರಿಲ್ 09: ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯಕೀಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರೆಸ್ಸೆಸ್ ಮುಖಂಡರೊಬ್ಬರ ಮೇಲೆ ಉಗ್ರರು ದಾಳಿ ನಡೆಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ದಾಳಿಯ ಸಂದರ್ಭದಲ್ಲಿ ಆರೆಸ್ಸೆಸ್ ಮುಖಂಡರ ರಕ್ಷಣೆಗೆಂದು ಬಂದ ಅವರ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈಯ್ಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ವೈದ್ಯಕೀಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಂದ್ರಕಾಂತ್ ಶರ್ಮಾ ಅವರ ಮೇಲೆ ಉಗ್ರರು ದಾಳಿ ನಡೆಸಿದ್ದರು.

ಪುಲ್ವಾಮಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ ಪುಲ್ವಾಮಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಪ್ರತ್ಯಕ್ಷದರ್ಶಿಗಳ ಪ್ರಕಾರ ಬಂದೂಕುಧಾರಿ ವ್ಯಕ್ತಿಯೊಬ್ಬ ಆಸ್ಪತ್ರೆಯ ಒಳಕ್ಕೆ ನುಗ್ಗಿ ಆರೆಸ್ಸೆಸ್ ಮುಖಂಡ ಶರ್ಮಾ ಮತ್ತು ಅವರ ಭದ್ರತಾ ಸಿಬ್ಬಂದಿ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಮೃತರಾದರೆ, ಶರ್ಮಾ ಅವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Terrorists attack an RSS man in Jammu and Kashmir

ಘಟನೆಯ ನಂತರ ಮುಂಜಾಗ್ರತೆ ಕ್ರಮವಾಗಿ ದೃಷ್ಟಿಯಿಂದ ಕಿಶ್ತ್ವಾರ್ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಕಳೆದ ವರ್ಷವೂ ಇಂಥದೇ ಘಟನೆಯಲ್ಲಿ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಮತ್ತು ಅವರ ಸಹೋದರ ಅಜಿತ್ ಅವರನ್ನು ಗುಂಡಿಕ್ಕಿ ಉಗ್ರರು ಹತ್ಯೆ ಮಾಡಿದ್ದರು.

English summary
Terrorists on Tuesday attacked RSS leader Chandrakant Sharma inside a hospital in Jammu and Kashmir's Kishtwar. security officer has been kille,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X