• search
 • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking News: ಶ್ರೀನಗರ್ ಆಸ್ಪತ್ರೆ ಬಳಿ ಉಗ್ರರು ಭದ್ರತಾ ಪಡೆ ಗುಂಡಿನ ಚಕಮಕಿ

|
Google Oneindia Kannada News

ಶ್ರೀನಗರ್, ನವೆಂಬರ್ 5: ಜಮ್ಮು ಕಾಶ್ಮೀರದ ಶ್ರೀನಗರ ಆಸ್ಪತ್ರೆಯೊಂದರಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆಸ್ಪತ್ರೆ ಮತ್ತು ಅದರ ಹಾಸ್ಟೆಲ್‌ಗಳನ್ನು ಭದ್ರತಾ ಪಡೆ ಸಿಬ್ಬಂದಿ ಸುತ್ತುವರಿದಿದ್ದಾರೆ. ಆದಾಗ್ಯೂ, ಈ ಪ್ರದೇಶದಲ್ಲಿದ್ದ ಸಾರ್ವಜನಿಕರ ಓಡಾಟದ ಲಾಭವನ್ನು ಪಡೆದು ಭಯೋತ್ಪಾದಕರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಭದ್ರತಾ ಪಡೆಗಳು ಧಾವಿಸಿವೆ.
"ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ನಾಗರಿಕರು ಈ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಲಾಭ ಪಡೆದ ಭಯೋತ್ಪಾದಕರು ತಪ್ಪಿಸಿಕೊಂಡಿದ್ದಾರೆ," ಎಂದು ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಆರಂಭದಲ್ಲಿ ಇದು ಆಕಸ್ಮಿಕ ಬೆಂಕಿಯ ಘಟನೆ ಎಂದು ಪೊಲೀಸರು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ನಾಪತ್ತೆಯಾದ ಯೋಧರ ಶೋಧ ಕಾರ್ಯಜಮ್ಮು-ಕಾಶ್ಮೀರದಲ್ಲಿ ನಾಪತ್ತೆಯಾದ ಯೋಧರ ಶೋಧ ಕಾರ್ಯ

ಶ್ರೀನಗರದ ಬೆಮಿನಾದ SKIMS ಆಸ್ಪತ್ರೆ ಬಳಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

   ರವೀಂದ್ರ ಜಡೇಜಾ ಕೊಟ್ಟ ಉತ್ತರಕ್ಕೆ ಫುಲ್‌ ಕಕ್ಕಾಬಿಕ್ಕಿಯಾದ ಪತ್ರಕರ್ತ | Oneindia Kannada

   ನವೆಂಬರ್ ತಿಂಗಳಿನಲ್ಲಿ ಮೊದಲ ದಾಳಿ:
   ಕಳೆದ ಅಕ್ಟೋಬರ್ ತಿಂಗಳ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ಇರುವ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಸರಣಿ ದಾಳಿಗಳನ್ನು ನಡೆಸಿದ್ದರು. ಅಕ್ಟೋಬರ್ ತಿಂಗಳ ಆರಂಭದಲ್ಲೇ ನಡೆಸಿದ ಎರಡು-ಮೂರು ದಾಳಿಗಳಲ್ಲಿ ಐದಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಕೊಂದು ಹಾಕಲಾಗಿತ್ತು. ಅದಾದ ನಂತರ ಮೊದಲ ಬಾರಿಗೆ ಉಗ್ರರು ಮತ್ತೊಮ್ಮೆ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.
   ನವೆಂಬರ್ 5ರಂದು ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತಲಿನಲ್ಲಿ ಕಾಣಿಸಿಕೊಂಡ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಯಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಉಗ್ರರ ಪತ್ತೆಗೆ ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ. ಉಗ್ರರ ಮತ್ತಷ್ಟು ಉದ್ದೇಶಿತ ದಾಳಿಗಳನ್ನು ತಡೆಯಲು ಶ್ರೀನಗರದಲ್ಲಿ ಹೆಚ್ಚುವರಿ 50 ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

   English summary
   Terrorists Fire on The Security Forces At SKIMS Medical College Hospital in Srinagar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X