ಜಮ್ಮು ಕಾಶ್ಮೀರ ಎನ್‌ಕೌಂಟರ್: ಎಲ್ಇಟಿ ಉಗ್ರ ಮುದಾಸೀರ್ ಸೇರಿ ಮೂವರ ಹತ್ಯೆ

ಶ್ರೀನಗರ್, ಜೂನ್ 21: "ಲಷ್ಕರ್-ಇ-ತೊಯ್ಬಾ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಮುದಾಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಸೊಪೋರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ," ಎಂದು ಸೋಮವಾರ ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆ ಸೊಪೋರ ಪ್ರದೇಶದ ಬ್ರಾಂತ್ ಬಳಿ ಎನ್‌ಕೌಂಟರ್ ನಡೆಸಲಾಗಿದೆ ಎಂದು ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ತಿಳಿಸಿದ್ದಾರೆ. "ಮುದಾಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರು ಅಡಗಿರು ಕುರಿತು ಮಾಹಿತಿ ಆಧರಿಸಿ ಭದ್ರತಾ ಸಿಬ್ಬಂದಿಯು ಶೋಧ ಕಾರ್ಯಾಚರಣೆ ಆರಂಭಿಸಿತು. ಭಾನುವಾರ ತಡರಾತ್ರಿ ಎನ್‌ಕೌಂಟರ್ ಆರಂಭವಾಗಿತ್ತು," ಎಂದು ಹೇಳಿದ್ದಾರೆ.

"ಮೋಸ್ಟ್ ವಾಟೆಂಡ್ ಉಗ್ರ ಮುದಾಸೀರ್ ಪಂಡಿತ್ ಅನ್ನು ಪೊಲೀಸ್ ಎನ್‌ಕೌಂಟರ್ ನಲ್ಲಿ ಹತ್ಯೆಗಯ್ಯಲಾಗಿದೆ. ಮೂವರು ಪೊಲೀಸ್ ಸಿಬ್ಬಂದಿ, ಇಬ್ಬರು ಕೌನ್ಸಿಲರ್ ಹಾಗೂ ಇಬ್ಬರು ನಾಗರಿಕರ ಕೊಲೆ ಸೇರಿದಂತೆ ಹಲವು ಉಗ್ರವಾದಿ ಚಟುಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಉಗ್ರನನ್ನು ಸೊಪೋರ ಬಳಿ ನಡೆಸಿದ ಎನ್‌ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ," ಎಂದು ಐಜಿಪಿ ಟ್ವೀಟ್ ಮಾಡಿದ್ದಾರೆ.

Three LeT Terrorist Killed Including Mudasir Pandit In Encounter At Jammu-Kashmirs Baramulla

ಮಾರ್ಚ್ ತಿಂಗಳಿನಲ್ಲಿ ನಾಲ್ಕು ಕೊಲೆ:

ಉಗ್ರ ಮುದಾಸೀರ್ ಪಂಡಿತ್ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದನು. 2021ರ ಮಾರ್ಟ್ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ಸೊಪೋರ ಪ್ರದೇಶದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಭಾಗಿಯಾದ ಇಬ್ಬರು ಬಿಜೆಪಿ ಕೌನ್ಸಲರ್ ಹಾಗೂ ಇಬ್ಬರು ಪೊಲೀಸರನ್ನು ಹತ್ಯೆಗೈದು ಪರಾರಿಯಾಗಿದ್ದನು ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+