ಪುಲ್ವಾಮಾ ಎನ್‌ಕೌಂಟರ್: ಮೂವರು ಉಗ್ರರನ್ನು ಹತ್ಯೆಗೈದ ಸೇನೆ
ಶ್ರೀನಗರ,ಜನವರಿ 29:ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯು ಮೂವರು ಉಗ್ರರನ್ನು ಹತ್ಯೆಮಾಡಿದೆ.
ಉಗ್ರರ ಉಪಸ್ಥಿತಿ ಕುರಿತು ಖಚಿತ ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಕಾರ್ಯಾಚರಣೆಗೆ ಇಳಿದವು. ಈ ವೇಳೆ ಸೇನಾ ಪಡೆಗಳ ಆಗಮನದ ಮಾಹಿತಿ ತಿಳಿಯುತ್ತಲೇ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದಾರೆ.
ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಮೂವರು ಉಗ್ರರು ಹತರಾಗಿದ್ದಾರೆ. ಪ್ರಸ್ತುತ ಸಾವನ್ನಪ್ಪಿದ ಉಗ್ರರ ಮಾಹಿತಿ ಪಡೆಯುವ ಕಾರ್ಯ ಸಾಗುತ್ತಿದ್ದು, ಘಟನಾ ಪ್ರದೇಶದ ಸುತ್ತಮುತ್ತ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಸೆಕ್ಟರ್ ನ ಮಂಡೂರ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ನಡೆದಿದ್ದು, ಈ ವೇಳೆ ಮೂವರು ಉಗ್ರರನ್ನು ಸೇನಾ ಪಡೆಗಳು ಹೊಡೆದುರುಳಿಸಿವೆ. ಅಂತೆಯೇ ಘಟನಾ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ಕೂಡ ಕೈಗೊಂಡಿವೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ.












Click it and Unblock the Notifications