ಶ್ರೀನಗರದಲ್ಲಿ ಎನ್ ಕೌಂಟರ್‌; ಮೂವರು ಉಗ್ರರ ಹತ್ಯೆ

ಶ್ರೀನಗರ, ಆಗಸ್ಟ್ 30 : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಬ್ಬರು ಪೊಲೀಸ್ ಅಧಿಕಾರಿ ಸಹ ಹುತಾತ್ಮರಾಗಿದ್ದಾರೆ.

ಶ್ರೀನಗರದ ಪಂಥಾ ಚೌಕ್‌ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಪ್ರದೇಶವನ್ನು ತಮ್ಮ ವಶಕ್ಕೆ ಪಡೆದಿರುವ ಭದ್ರತಾ ಪಡೆಗಳು ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಇದುವರೆಗೂ ಮೂವರು ಉಗ್ರರನ್ನು ಕೊಂದು ಹಾಕಲಾಗಿದೆ. ಎಎಸ್‌ಐ ಬಾಬು ರಾಮ್ ಎಂಬ ಪೊಲೀಸ್ ಅಧಿಕಾರಿಯೂ ಹುತಾತ್ಮರಾಗಿದ್ದಾರೆ.

Terrorist Killed

ಶನಿವಾರ ರಾತ್ರಿ ಆರಂಭವಾದ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಇನ್ನೂ ಇಬ್ಬರು ಉಗ್ರರು ಅಡಗಿರಬಹುದು ಎಂದು ಶಂಕಿಸಲಾಗಿದೆ. ಪಂಥಾ ಚೌಕ್‌ ಪ್ರದೇಶಕ್ಕೆ ಉಗ್ರರು ಜೀಪ್‌ನಲ್ಲಿ ಬಂದಿರಬಹುದು ಎಂದು ಶಂಕಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+