• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾಕ್‌ನಿಂದ ಮತ್ತೆ ಕದನವಿರಾಮ ಉಲ್ಲಂಘನೆ: ಇಬ್ಬರು ಸೈನಿಕರು ಹುತಾತ್ಮ

|
Google Oneindia Kannada News

ಶ್ರೀನಗರ, ನವೆಂಬರ್ 27: ಪಾಕಿಸ್ತಾನವು ಪದೇ ಪದೇ ಕದನವಿರಾಮ ಉಲ್ಲಂಘಿಸುತ್ತಿದ್ದು, ಇಂದು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧರನ್ನು ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ರೈಫಲ್ಮನ್ ಸುಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಶ್ರೀನಗರದ ಬಳಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮಶ್ರೀನಗರದ ಬಳಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ ಒಸಿ (ಗಡಿ ನಿಯಂತ್ರಣ ರೇಖೆ)ಯಲ್ಲಿನ ಸುಂದರ್ ಬನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಪಾಕಿಸ್ತಾನ ಸೇನೆಯ ತೀವ್ರ ಶೆಲ್ಲಿಂಗ್ ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ.

ಗುರುವಾರ ಕೂಡ ಸುಬೇದಾರ್ ಸ್ವತಂತ್ರ ಸಿಂಗ್ ಎಂಬ ಯೋಧರು ಪೂಂಚ್ ಜಿಲ್ಲೆಯ ಕಿರ್ನಿ ಮತ್ತು ಕಸ್ಬಾ ಸೆಕ್ಟರ್ ನಲ್ಲಿ ಪಾಕಿಸ್ತಾನದ ಶೆಲ್ಲಿಂಗ್ ನಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.

ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ತಂಡದ ಮೇಲೆ ಮೂವರು ಉಗ್ರರ ತಂಡ ಏಕಾಏಕಿ ದಾಳಿ ನಡೆಸಿತ್ತು. ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಯಲಿಲ್ಲ.

2008ರ ನವೆಂಬರ್ 26ರಂದು ಉಗ್ರರು ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದರು. ಈ ಉಗ್ರ ದಾಳಿ ನಡೆದು ನಿನ್ನೆಗೆ 12 ವರ್ಷಗಳಾದ ಹಿನ್ನೆಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಸದ್ಯ ಗುಂಡಿನ ದಾಳಿ ನಡೆದ ಜಾಗವನ್ನು ಭಾರತೀಯ ಸೇನೆ ಸುತ್ತುವರೆದಿದ್ದು ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 26/11 ಮುಂಬೈ ದಾಳಿಯಲ್ಲಿ ತನ್ನ ದೇಶದ 11 ಭಯೋತ್ಪಾದಕರ ಉಪಸ್ಥಿತಿಯನ್ನು ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಒಪ್ಪಿಕೊಂಡಿತ್ತು.

ಇತ್ತೀಚೆಗಷ್ಟೇ ಪುಲ್ವಾಮಾ ದಾಳಿಯನ್ನು ಮಾಡಿಸಿದವರೇ ನಾವು ಎಂದು ಪಾಕಿಸ್ತಾನದ ಸಚಿವರೊಬ್ಬರು ಬಹಿರಂಗವಾಗಿ ಒಪ್ಪಿಕೊಂಡಿದ್ದರು.

English summary
Two Army jawans were killed on Friday as Pakistani troops opened heavy fire and shelled mortars along the Line of Control (LoC) in Jammu and Kashmir's Rajouri district, a defence official said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X