ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಕೊರೊನಾವೈರಸ್ ಲಸಿಕೆ ನೀಡಲು ತುಂಬಿ ಹರಿವ ನದಿ ದಾಟಿದ ವೈದ್ಯಕೀಯ ಸಿಬ್ಬಂದಿ!

|
Google Oneindia Kannada News

ನವದೆಹಲಿ, ಜುಲೈ 12: ಭಾರತದಾದ್ಯಂತ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿಯಂತ್ರಣಕ್ಕಾಗಿ ಲಸಿಕೆ ವಿತರಣೆ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಕೊವಿಡ್-19 ಮಹಾಮಾರಿಯಿಂದ ದೇಶವನ್ನು ಹಾಗೂ ಪ್ರಜೆಗಳನ್ನು ರಕ್ಷಿಸುವುದಕ್ಕಾಗಿ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿದ್ದಾರೆ.

ದೇಶದಲ್ಲಿ ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ನೀಡುವುದಕ್ಕೆ ಕೇಂದ್ರ ಸರ್ಕಾರ ಘೋಷಿಸಿದೆ. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಟ್ರಾಲಾದಲ್ಲಿ ಲಸಿಕೆ ನೀಡಲು ತೋರಿದ ಧೈರ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಸ್ಪುಟ್ನಿಕ್-ವಿ ಸೂಪರ್: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕೆ ರಷ್ಯಾ ಲಸಿಕೆಯೇ ಮದ್ದು!?ಸ್ಪುಟ್ನಿಕ್-ವಿ ಸೂಪರ್: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕೆ ರಷ್ಯಾ ಲಸಿಕೆಯೇ ಮದ್ದು!?

ರಚೌರಿ ಜಿಲ್ಲೆಯ ಟ್ರಾಲಾದ ನದಿಯಾಚೆಗಿನ ಗ್ರಾಮಸ್ಥರಿಗೆ ಕೊರೊನಾವೈರಸ್ ಲಸಿಕೆ ನೀಡುವುದಕ್ಕಾಗಿ ವೈದ್ಯಕೀಯ ಸಿಬ್ಬಂದಿ ಇಬ್ಬರು ಕೈ-ಕೈ ಹಿಡಿದುಕೊಂಡು ತುಂಬಿ ಹರಿಯುತ್ತಿರುವ ನದಿಯನ್ನು ದಾಟಿ ಹೋಗಿದ್ದಾರೆ. ಈ ದೃಶ್ಯವನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 Two Health Workers Crossed River To Give Covid-19 Vaccine To Jammu Kashmir Villagers

ವೈದ್ಯಕೀಯ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ:

ಕೊರೊನಾವೈರಸ್ ಸೋಂಕಿನ ಹರಡುವಿಕೆ ಭೀತಿ ನಡುವೆ ಲಸಿಕೆ ವಿತರಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಶ್ರಮಿಸುತ್ತಿರು ವೈದ್ಯಕೀಯ ಸಿಬ್ಬಂದಿಯ ಶ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,35,287 ಜನರಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ ಈವರೆಗೂ 37,73,52,501 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ವಿತರಣೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

English summary
Two Health Workers Crossed River To Give Covid-19 Vaccine To Jammu Kashmir Villagers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X