ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಇಬ್ಬರು ಜೈಷ್-ಎ-ಮೊಹಮ್ಮದ್ ಉಗ್ರರ ಬಂಧನ

|
Google Oneindia Kannada News

ಶ್ರೀನಗರ, ಜನವರಿ 16 : ಗಣರಾಜ್ಯೋತ್ಸವದ ವೇಳೆ ದಾಳಿ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಉಗ್ರರನ್ನು ಶ್ರೀನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸದಸ್ಯರಾಗಿದ್ದು, ವಿಚಾರಣೆ ಮುಂದುವರೆದಿದೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಪೊಲೀಸರು ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಜನವರಿ 26ರ ಗಣರಾಜ್ಯೋತ್ಸವದ ವೇಳೆ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಇವರು ಸಂಚು ರೂಪಿಸಿದ್ದರು. ಇನ್ನೂ ಮೂವರು ಉಗ್ರರು ಅಡಗಿರುವ ಶಂಕೆ ಇದ್ದು ಹುಡುಕಾಟ ನಡೆಯುತ್ತಿದೆ.

ಹಿಮದ ಮೇಲೆ ಜಾರಿಕೊಂಡು ಪಾಕಿಸ್ತಾನ ತಲುಪಿದ ಭಾರತೀಯ ಸೈನಿಕಹಿಮದ ಮೇಲೆ ಜಾರಿಕೊಂಡು ಪಾಕಿಸ್ತಾನ ತಲುಪಿದ ಭಾರತೀಯ ಸೈನಿಕ

Two Jaish-e-Mohammad Terrorists Arrested

ಜೈಷ್-ಎ-ಮೊಹಮ್ಮದ್ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾಗಿದೆ. ಈ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್. ಕಾಶ್ಮೀರದಲ್ಲಿ ಹಿಂದೆಯೂ ಅನೇಕ ಬಾರಿ ಈ ಸಂಘಟನೆ ದಾಳಿಗಳನ್ನು ನಡೆಸಿದೆ. ಸ್ಥಳೀಯ ಯುವಕರನ್ನು ಸಂಘಟನೆಗೆ ಸೇರಿಸಿಕೊಂಡು ತರಬೇತಿಯನ್ನು ನೀಡುತ್ತದೆ.

ದೇವಿಂದರ್ ಸಿಂಗ್ ರಾಷ್ಟ್ರಪತಿ ಪದಕ ಪಡೆದಿರಲಿಲ್ಲದೇವಿಂದರ್ ಸಿಂಗ್ ರಾಷ್ಟ್ರಪತಿ ಪದಕ ಪಡೆದಿರಲಿಲ್ಲ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಕಾಶ್ಮೀರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು, ಇಂಟರ್‌ ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು.

ಜಮ್ಮುವಿನಲ್ಲಿ ಉಗ್ರರ ದಾಳಿ; ಇಬ್ಬರು ಯೋಧರು ಹುತಾತ್ಮಜಮ್ಮುವಿನಲ್ಲಿ ಉಗ್ರರ ದಾಳಿ; ಇಬ್ಬರು ಯೋಧರು ಹುತಾತ್ಮ

370ನೇ ವಿಧಿ ರದ್ದುಗೊಳಿಸಿದ ಬಳಿಕ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವದ ವೇಳೆ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ. ಈ ಸಂಚಿನ ಭಾಗವಾಗಿದ್ದ ಜೈಷ್-ಎ-ಮೊಹಮ್ಮದ್ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

English summary
Ahead of the January 26 Republic day Jammu and Kashmir police busted Jaish-e-Mohammad terror module and arrested 2 terrorists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X