ಜಮ್ಮು ಕಾಶ್ಮೀರದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರ ಹತ್ಯೆ
ರಜೌರಿ, ಜುಲೈ 29: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಪ್ರದೇಶದಲ್ಲಿರುವ ಗಡಿಯಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯಗೈದಿದೆ.
ಮತ್ತಿಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಮಂಗಳವಾರ ಮಧ್ಯರಾತ್ರಿ ಗಡಿ ಬಳಿ ಬಂದಿರುವ ನಾಲ್ವರು ಉಗ್ರರು ಗಡಿ ನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನಾಪಡೆಗಳು ಉಗ್ರರ ಚಟುವಟಿಕೆಗಳನ್ನು ಗಮನಿಸಿದ್ದು, ದಿಟ್ಟ ಉತ್ತರ ನೀಡಿ, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಇನ್ನು ಇಬ್ಬರು ಉಗ್ರರು ಪರಾರಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications