ಜಮ್ಮು ಕಾಶ್ಮೀರದಲ್ಲಿ ಇಬ್ಬರಿಗೆ ಮಾರಣಾಂತಿಕ ಕೊರೊನಾ ಸೋಂಕು ಶಂಕೆ
ಮಾರಣಾಂತಿಕ ಕೊರೊನಾ ವೈರಸ್ ನಿಂದಾಗಿ ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಚೀನಾವೊಂದರಲ್ಲೇ ಡೆಡ್ಲಿ ಕೊರೊನಾ ವೈರಸ್ ನಿಂದ 3000 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನೋವಲ್ ಕೊರೊನಾ ವೈರಸ್ ಇದೀಗ ಭಾರತಕ್ಕೂ ವಕ್ಕರಿಸಿದೆ.
ಭಾರತದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ 31ಕ್ಕೆ ಏರಿದೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಬಗ್ಗೆ ಶಂಕಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಇಬ್ಬರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ರಕ್ತ ಪರೀಕ್ಷೆಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಬ್ಬರನ್ನೂ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೊರೊನಾ ಭೀತಿ ಹೆಚ್ಚಾಗಿರುವ ಕಾರಣ ಜಮ್ಮು ಮತ್ತು ಸಾಂಬಾ ಜಿಲ್ಲೆಗಳ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮಾರ್ಚ್ 31 ರವರೆಗೆ ಮುಚ್ಚಲು ಜಮ್ಮು ಮತ್ತು ಕಾಶ್ಮೀರದ ಪ್ರಿನ್ಸಿಪಾಲ್ ಸೆಕ್ರೆಟರಿ (ಪ್ಲಾನ್ನಿಂಗ್) ಆದೇಶಿಸಿದ್ದಾರೆ.
ಹಾಗೇ, ಜಮ್ಮು ಮತ್ತು ಕಾಶ್ಮೀರದಲ್ಲಿ ಬೈಯೋಮೆಟ್ರಿಕ್ ಹಾಜರಾತಿಗೂ ಮಾರ್ಚ್ 31 ರವರೆಗೆ ಬ್ರೇಕ್ ಬಿದ್ದಿದೆ.












Click it and Unblock the Notifications