ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಇಬ್ಬರು ಉಗ್ರರ ಹತ್ಯೆ

ಶೋಪಿಯಾನ್, ಜೂನ್ 11: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭಾರತೀಯ ಸೇನೆಯ ನಡುವೆ ಮಂಗಳವಾರ ಬೆಳಗ್ಗಿನ ಜಾವದಿಂದ ಆರಂಭವಾದ ಗುಂದಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನ ಅವ್ನೀರಾ ಎಂಬಲ್ಲಿ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

ಕಣಿವೆ ರಾಜ್ಯದಲ್ಲಿ ಶಾಂತಿ ಕದಡುವ ಸಲುವಾಗಿ ಅಲ್ ಖೈದಾ ಮತ್ತು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯಗಳೆರಡೂ ಸೇರಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿವೆ ಎಂಬ ಮಾಹಿತಿ ಲಭ್ಯವಾಗಿರುವ ಕಾರಣ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿ, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ.

Two terrorists killed by Indian army in Jammu and Kashmir

ಜೂನ್ 07 ರಂದು ಶುಕ್ರವಾರ ಪುಲ್ವಾಮಾದ ಲಾಸ್ಸಿಪೊರ ಎಂಬಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದು, ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಮೇ 30 ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೋಪೋರ್ ಎಂಬಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿತ್ತು. ಮೇ 22 ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪೊರ ಎಂಬಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿತ್ತು. ಅದಕ್ಕೂ ಮುನ್ನ ಮೇ 21 ರಂದು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆಯ ಯೋಧರು ಯಶಸ್ವಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+