ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ನವೆಂಬರ್ 11: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು ಕಾಶ್ಮೀರ ಸುಮಾರು 90 ದಿನಗಳ ಬಳಿಕ ರೈಲು ಸೇವೆ ಆರಂಭಗೊಂಡಿದೆ.
ಒಂದೆರೆಡು ದಿನಗಳ ಹಿಂದಷ್ಟೇ ಜಮ್ಮು -ಕಾಶ್ಮೀರದಲ್ಲಿ ನಡೆದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಬೆಳಗಾವಿ ಯೋಧರೊಬ್ಬರು ಹುತಾತ್ಮರಾಗಿದ್ದರು. . ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಮಧ್ಯರಾತ್ರಿ 2.30ರ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡಿದೆ ಎಂದಿದ್ದರು.
ಪೂಂಚ್ ಜಿಲ್ಲ ಕೃಷ್ಣಘಾಟಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನವನ್ನು ಹಿಂಪಡೆಯಲಾಗಿದ್ದು, ಆರ್ಟಿಕಲ್ 370 ರದ್ದುಗೊಳಿಸಲಾಗಿದೆ. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಕೆಲ ದಿನಗಳ ಕಾಲ ಯಾವುದೇ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಜೊತೆಗೆ ಇಂಟರ್‌ನೆಟ್ ಸಂಪರ್ಕ ಕೂಡ ಕಡಿತಗೊಳಿಸಲಾಗಿತ್ತು.












Click it and Unblock the Notifications