• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

|
Google Oneindia Kannada News

ಶ್ರೀನಗರ್, ಜುಲೈ 14: 'ಜಮ್ಮು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದಿರುಳಿಸಿದ್ದಾರೆ. ಮೃತರ ಗುರುತು ಹಾಗೂ ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ಸಿಕ್ಕಿಲ್ಲ, ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

"ಶ್ರೀನಗರ್ ದನ್ಮರ್ ಪ್ರದೇಶ ಮತ್ತು ಸಾಫಕಾದಲ್-ಸೌರಾ ರಸ್ತೆಯ ಸುತ್ತಮುತ್ತಲಿನ ಮನೆಗಳಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ಶುಕ್ರವಾರ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ," ಎಂದು ಪೊಲೀಸ್ ಅಧಿಕಾರಿಗಳಉ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಡ್ರೋನ್ ದಾಳಿ ಅಪಾಯದ ಬೆನ್ನಲ್ಲೇ ಕಣ್ಗಾವಲು ವ್ಯವಸ್ಥೆಜಮ್ಮು ಕಾಶ್ಮೀರ: ಡ್ರೋನ್ ದಾಳಿ ಅಪಾಯದ ಬೆನ್ನಲ್ಲೇ ಕಣ್ಗಾವಲು ವ್ಯವಸ್ಥೆ

ಮನೆಗಳಲ್ಲಿ ಅಡಗಿ ಕುಳಿತಿರುವ ಉಗ್ರರನ್ನು ಪತ್ತೆ ಮಾಡುವುದಕ್ಕಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿತ್ತು. ಆದರೆ ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆ ಭದ್ರತಾ ಪಡೆಯು ಎನ್ ಕೌಂಟರ್ ನಡೆಸಿದೆ.

ಬುಧವಾರ ಪುಲ್ವಾಮಾನದಲ್ಲಿ 3 ಉಗ್ರರ ಹತ್ಯೆ:

ಕಳೆದ ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಮನೆಯಲ್ಲಿ ಅಡಗಿ ಕುಳಿತ ಮೂವರು ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾರೆ. ಈ ಪೈಕಿ ಒಬ್ಬ ಪಾಕಿಸ್ತಾನಿ ಮೂಲದ ಎಲ್ಇಟಿ ಕಮಾಂಡರ್ ಏಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಸ್ಥಳೀಯ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ.

ಪುಲ್ವಾಮಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುಲ್ವಾಮಾ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಭದ್ರತಾ ಸಿಬ್ಬಂದಿ ಮತ್ತು ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.

English summary
Two Terrorists Killed In Security Forces Firing In Jammu Kashmir Srinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X