ಜಮ್ಮು ಮತ್ತು ಕಾಶ್ಮಿರದಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭಾರತೀಯ ಸೇನೆ
ಶ್ರೀನಗರ, ಮೇ 30: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೋಪೋರ್ ಎಂಬಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.
ಇಂದು ಬೆಳಗ್ಗೆಯಿಂದಲೂ ಸೋಪೋರ್ ನಲ್ಲಿ ಗುಂಡಿನ ಚಕಮಕಿ ನಡೆಯುತ್ತಿತ್ತು. ಸೋಪೋರ್ ನ ಡಾಂಗರ್ ಪೋರಾ ಎಂಬಲ್ಲಿ ಭಯೋತ್ಪಾದಕರು ಅಡಗಿಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇಲೆ ಭಾರತೀಯ ಯೋಧರು ದಾಳಿ ನಡೆಸಿದ್ದರು. ಇದೀಗ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಮೇ 22 ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪೊರ ಎಂಬಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿತ್ತು.

ಭಾರತೀಯ ಸೇನೆಯೆ 34 ಆರ್ ಆರ್ ಮತ್ತು ಎಸ್ ಒಗಿ ತಂಡಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹೊಡೆದುರುಳಿಸಲಾಗಿದೆ.
ಹತ್ಯೆಗೀಡಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರೆಂದು ಮೂಲಗಳು ತಿಳಿಸಿದ್ದವು.
ಅದಕ್ಕೂ ಮುನ್ನ ಮೇ 21 ರಂದು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆಯ ಯೋಧರು ಯಶಸ್ವಿಯಾಗಿದ್ದರು. ಲೋಕಸಭೆ ಚುನಾವಣೆಯ ಫಲಿತಾಂಶದ ದಿನ ಹಿನ್ನಲೆಯಲ್ಲಿ ದೇಶದಲ್ಲಿ ಉಗ್ರ ಚಟುವಟಿಕೆಗಳು ನಡೆವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.












Click it and Unblock the Notifications