ದಕ್ಷಿಣ ಕಾಶ್ಮೀರದಲ್ಲಿಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಶ್ರೀನಗರ, ಏ.25: ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಗುರುವಾರ ಬೆಳಗಿನ ಜಾವ ಉಗ್ರರು ಇರುವ ಸುಳಿವು ಪಡೆದ ಯೋಧರು ಅವರಿಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಅವರು ಅನಂತ್‌ನಾಗ್ ಜಿಲ್ಲೆಯ ಬಿಜ್ ಬೆಹರಾದ ಬಾಗೆಂದರ್ ಮೊಹಲ್ಲಾದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರಿಂದ, ಭದ್ರತಾಪಡೆ ಸಿಬ್ಬಂದಿ ಕೂಡ ಪ್ರತಿದಾಳಿ ಆರಂಭಿಸಿದರು.

ಈ ದಾಳಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಸ್ಥಳದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಪುಸ್ತಕಗಳಲ್ಲದೆ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.












Click it and Unblock the Notifications