ಶ್ರೀನಗರದಲ್ಲಿ ಓರ್ವ ಉಗ್ರನನ್ನು ಹತ್ಯೆಗೈದ ಭಾರತೀಯ ಸೇನಾಪಡೆ
ಶ್ರೀನಗರ, ಡಿಸೆಂಬರ್ 30: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾ ಓರ್ವ ಉಗ್ರರನ್ನು ಹತ್ಯೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾವಾಯ್ಪೊರಾ ಪ್ರದೇಶದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಘಟನೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಉಗ್ರ ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವನಾಗಿದ್ದಾನೆಂಬುದು ಇನ್ನೂ ತಿಳಿದುಬಂದಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಾವಾಯ್ಪೊರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದವು.
ಈ ವೇಳೆ ಅಡಗಿ ಕುಳಿತಿದ್ದ ಉಗ್ರ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಉಗ್ರನೋರ್ವನನ್ನು ಹತ್ಯೆ ಮಾಡಿದ್ದಾರೆಂದು ವರಿದಿಗಳು ತಿಳಿಸಿವೆ.












Click it and Unblock the Notifications