ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ 10ರಷ್ಟು ಮೀಸಲಾತಿಗೆ ಕೇಂದ್ರದ ಒಪ್ಪಿಗೆ
ನವದೆಹಲಿ, ಫೆಬ್ರವರಿ 28 : ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ವಿಧೇಯಕಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ಸಂಬಂಧ ಎರಡು ಪ್ರಮುಖ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಗುರುವಾರ ತೆಗೆದುಕೊಂಡಿದೆ.
ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ವಿಧೇಯಕ 2019ಕ್ಕೆ ಒಪ್ಪಿಗೆ ನೀಡಲಾಗಿದೆ.

ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ದೊರೆಯಲಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮಿಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈಗಿರುವ ಮೀಸಲಾತಿ ಜೊತೆಗೆ ಶೇ 10ರಷ್ಟು ಮೀಸಲಾತಿ ದೊರೆಯಲಿದೆ.
ತಿದ್ದುಪಡಿ ವಿಧೇಯಕದ ಬಗ್ಗೆ ಅಂತಿಮ ಆದೇಶ ಹೊರಬಿದ್ದ ಬಳಿಕ ಎಸ್ ಮತ್ತು ಎಸ್‌ಟಿ ಪಂಗಡದವರಿಗೆ ಉದ್ಯೋಗದಲ್ಲಿನ ಬಡ್ತಿಗೆ ಸಹಾಯಕವಾಗಲಿದೆ. ಶೇ 10ರಷ್ಟು ಮೀಸಲಾತಿ ಆರ್ಥಿಕವಾಗಿ ಹಿಂದುಳಿದವರಿಗೆ ವಿದ್ಯಾಸಂಸ್ಥೆಗಳು, ಸರ್ಕಾರಿ ಉದ್ಯೋಗದಲ್ಲಿ ಈಗಿರುವ ಮೀಸಲಾತಿ ಜೊತೆಗೆ ದೊರೆಯಲಿದೆ.












Click it and Unblock the Notifications