ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ 10ರಷ್ಟು ಮೀಸಲಾತಿಗೆ ಕೇಂದ್ರದ ಒಪ್ಪಿಗೆ

|
Google Oneindia Kannada News

ನವದೆಹಲಿ, ಫೆಬ್ರವರಿ 28 : ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ವಿಧೇಯಕಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ಸಂಬಂಧ ಎರಡು ಪ್ರಮುಖ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಗುರುವಾರ ತೆಗೆದುಕೊಂಡಿದೆ.

ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ವಿಧೇಯಕ 2019ಕ್ಕೆ ಒಪ್ಪಿಗೆ ನೀಡಲಾಗಿದೆ.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

Union Cabinet approves Jammu and Kashmir Reservation Amendment Ordinance

ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ದೊರೆಯಲಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮಿಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈಗಿರುವ ಮೀಸಲಾತಿ ಜೊತೆಗೆ ಶೇ 10ರಷ್ಟು ಮೀಸಲಾತಿ ದೊರೆಯಲಿದೆ.

370ನೇ ವಿಧಿ ರದ್ದು ಪಡಿಸುವ ಆನ್ ಲೈನ್ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ370ನೇ ವಿಧಿ ರದ್ದು ಪಡಿಸುವ ಆನ್ ಲೈನ್ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ

ತಿದ್ದುಪಡಿ ವಿಧೇಯಕದ ಬಗ್ಗೆ ಅಂತಿಮ ಆದೇಶ ಹೊರಬಿದ್ದ ಬಳಿಕ ಎಸ್‌ ಮತ್ತು ಎಸ್‌ಟಿ ಪಂಗಡದವರಿಗೆ ಉದ್ಯೋಗದಲ್ಲಿನ ಬಡ್ತಿಗೆ ಸಹಾಯಕವಾಗಲಿದೆ. ಶೇ 10ರಷ್ಟು ಮೀಸಲಾತಿ ಆರ್ಥಿಕವಾಗಿ ಹಿಂದುಳಿದವರಿಗೆ ವಿದ್ಯಾಸಂಸ್ಥೆಗಳು, ಸರ್ಕಾರಿ ಉದ್ಯೋಗದಲ್ಲಿ ಈಗಿರುವ ಮೀಸಲಾತಿ ಜೊತೆಗೆ ದೊರೆಯಲಿದೆ.

English summary
After cabinet meeting Union Minister Arun Jaitley said Union Cabinet approved for the Constitution (Application to Jammu & Kashmir) Amendment Order, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X