Video: ಜಮ್ಮುವಿನಲ್ಲಿ ಸಿಐಎಸ್ಎಫ್ ಯೋಧರ ಬಸ್ ಮೇಲೆ ಉಗ್ರರ ದಾಳಿ

ಶ್ರೀನಗರ, ಏಪ್ರಿಲ್ 23: ಜಮ್ಮುವಿನ ಸುಂಜ್ವಾನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮುಂಜಾನೆ ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಎನ್‌ಕೌಂಟರ್ ಶುರುವಾಗಿದೆ. ಪ್ರಧಾನಿ ಮೋದಿ ಭೇಟಿಗೂ ಎರಡು ದಿನದ ಮೊದಲು ಸಿಐಎಸ್ಎಫ್ ಪಡೆಯ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಭದ್ರತಾ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಈ ವೇಳೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 15 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಸಿಐಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಸಿಐಎಸ್ಎಫ್ ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿತು. ಭಯೋತ್ಪಾದಕರ ದಾಳಿಯಲ್ಲಿ ಒಬ್ಬ ಸಿಐಎಸ್ಎಫ್ ಅಧಿಕಾರಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ," ಎಂದು ಅಧಿಕಾರಿ ತಿಳಿಸಿದ್ದಾರೆ. ಇದರ ಮಧ್ಯೆ ಸಿಐಎಸ್ಎಫ್ ಯೋಧರ ಬಸ್ ಮೇಲೆ ನಡೆದ ದಾಳಿ ಹೇಗಿತ್ತು ಎನ್ನುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Video: Terrorist attack on the bus carrying CISF personnel in the Sunjwan area of Jammu

ಉಗ್ರರ ದಾಳಿ ವಿಡಿಯೋ ವೈರಲ್:

ಜಮ್ಮುವಿನ ಸುಂಜ್ವಾನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಬೆಳಗ್ಗೆ 4.25 ರ ಸುಮಾರಿಗೆ ಉಗ್ರರು ಸಿಐಎಸ್ಎಫ್ ಯೋಧರ ಬಸ್ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಸಿಸಿ ಟಿವಿಯಲ್ಲಿ ದೃಶ್ಯಾವಳಿ ಸೆರೆಯಾಗಿದೆ.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಭದ್ರತಾ ಪರಿಶೀಲನೆ:

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಭಾನುವಾರ ಜಮ್ಮುವಿನ ಸಾಂಬಾ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಮೋದಿ ಭೇಟಿಗೂ ಮುನ್ನವೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾವಳಿ ಹೆಚ್ಚಾಗಿದ್ದು, ಭದ್ರತಾ ಪಡೆ ಉಗ್ರರನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಪ್ರಧಾನಿ ಬರುವ ದಿನದಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಯಾವುದೇ ಉಗ್ರ ಚಟುವಟಿಕೆಗಳು ನಡೆಯದಂತೆ ಕಣ್ಗಾವಲಿಟ್ಟಿದ್ದು, ಹೆಚ್ಚಿನ ಭದ್ರತೆಯನ್ನ ಒದಗಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+