ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CRPF ಶಿಬಿರದಲ್ಲಿ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾದ ಬುರ್ಖಾಧಾರಿ ಮಹಿಳೆ ಅರೆಸ್ಟ್‌

|
Google Oneindia Kannada News

ಶ್ರೀನಗರ ಏಪ್ರಿಲ್ 1: ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಭದ್ರತಾ ಪಡೆಗಳ ಬಂಕ್‌ಗೆ ಪೆಟ್ರೋಲ್ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯನ್ನು ಬಾರಾಮುಲ್ಲಾ ನಿವಾಸಿ ಹಸೀನಾ ಅಖ್ತರ್ ಎಂದು ಗುರುತಿಸಲಾಗಿದೆ. ಆಕೆ ನಿಷೇಧಿತ ಪ್ರತ್ಯೇಕತಾವಾದಿ ಗುಂಪು ದುಖ್ತರನ್-ಎ-ಮಿಲಾತ್ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದು ಬಂದಿದೆ. ಆಕೆ ಈಗಾಗಲೇ ಯುಎಪಿಎ ಅಡಿಯಲ್ಲಿ ಮೂರು ಪ್ರಕರಣಗಳನ್ನು ಎದುರಿಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ನಡೆದ ಈ ದಾಳಿಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಕ್ಯಾಂಪ್‌ನ ಸಿಸಿಟಿವಿ ಫೂಟೇಜ್‌ನಲ್ಲಿ ಮಹಿಳೆಯು ರಸ್ತೆಯ ಮಧ್ಯದಲ್ಲಿ ನಿಂತು ತನ್ನ ಬ್ಯಾಗ್‌ನಲ್ಲಿ ತಂದಿದ್ದ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗುತ್ತಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಜೊತೆಗೆ ಭಾರೀ ವೈರಲ್ ಕೂಡ ಆಗಿತ್ತು. ಸಿಸಿಟಿವಿ ದೃಶ್ಯಗಳನ್ನು ಧಾರಿಸಿ ಪೊಲೀಸರು ಈಕೆಯನ್ನು ಬಂಧಿಸಿದ್ದಾರೆ. ಭದ್ರತಾ ಬ್ಯಾರಿಕೇಡ್‌ಗಳ ಹೊರಗೆ ಬಾಂಬ್ ಬಿದ್ದಿದ್ದು, ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

CRPF ಶಿಬಿರದಲ್ಲಿ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾದ ಬುರ್ಖಾಧಾರಿ ಮಹಿಳೆ CRPF ಶಿಬಿರದಲ್ಲಿ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾದ ಬುರ್ಖಾಧಾರಿ ಮಹಿಳೆ

ಮಹಿಳೆ ನಿಷೇಧಿತ ಪ್ರತ್ಯೇಕತಾವಾದಿ ಗುಂಪು ದುಖ್ತರನ್-ಎ-ಮಿಲಾತ್‌ನೊಂದಿಗೆ ಸಂಬಂಧ ಹೊಂದಿದ್ದಾಳೆ. ಜೊತೆಗೆ ರಡು ದಿನಗಳ ಕಾಲ ಬಂಧನದಲ್ಲಿದ್ದ ಆಕೆ ಕೆಲವು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಪೆಟ್ರೋಲ್ ಬಾಂಬ್ ದಾಳಿ ನಡೆದ ಕೂಡಲೇ ಮಹಿಳೆಯನ್ನು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Woman Arrested For Threw A Petrol Bomb At CRPF Camp

"ಘಟನೆಯ ನಂತರ ಅವಳು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದಳು. ಆದರೆ ಇಂದು ಸೋಪೋರ್ ಪೊಲೀಸರು ಅವಳನ್ನು ಬಂಧಿಸಿದ್ದಾರೆ. ಜೊತೆಗೆ ತನಿಖೆ ನಡೆಯುತ್ತಿದೆ" ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ. ಮಹಿಳೆಯ ಪತಿ ಕೂಡ ಈ ಹಿಂದೆ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದು, ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಕುಮಾರ್ ಹೇಳಿದ್ದಾರೆ.

Recommended Video

ಮರಳಿ ಫಾರ್ಮ್ ಗೆ ಬಂದ ರಾಬಿನ್ ಉತ್ತಪ್ಪ! | Oneindia Kannada

English summary
The burqa-clad women who threw a petrol bomb at a security forces bunker in Jammu and Kashmir's Sopore, has been arrested, the police have said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X