ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಪ್ರಯಾಣಿಕ ವಿಮಾನಗಳಿಗೆ ಆಸ್ಟ್ರೇಲಿಯಾದಿಂದ ತಾತ್ಕಾಲಿಕ ನಿರ್ಬಂಧ

|
Google Oneindia Kannada News

ಸಿಡ್ನಿ, ಏಪ್ರಿಲ್ 27: ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ತೆರಳುವ ಪ್ರಯಾಣಿಕರ ವಿಮಾನಗಳಿಗೆ ಆಸ್ಟ್ರೇಲಿಯಾ ನಿರ್ಬಂಧ ವಿಧಿಸಿದೆ.

ಮೇ 15ರವರೆಗೆ ಭಾರತದಿಂದ ಯಾವುದೇ ಪ್ರಯಾಣಿಕ ವಿಮಾನ ಆಸ್ಟ್ರೇಲಿಯಾಗೆ ಬರದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಆಸ್ಟ್ರೇಲಿಯಾ ಪತ್ರಿಕೆಯದ್ದು 'ದುರುದ್ದೇಶಪೂರಿತ' ವರದಿ ಎಂದ ಭಾರತಆಸ್ಟ್ರೇಲಿಯಾ ಪತ್ರಿಕೆಯದ್ದು 'ದುರುದ್ದೇಶಪೂರಿತ' ವರದಿ ಎಂದ ಭಾರತ

ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ನಿರ್ಬಂಧದ ಕುರಿತು ಮಾತನಾಡಿದ್ದಾರೆ, ಹಾಗೆಯೇ ಭಾರತಕ್ಕೆ ಅಗತ್ಯವಿರುವ ಆಮ್ಲಜನಕ ಟ್ಯಾಂಕ್, ವೆಂಟಿಲೇಟರ್‌ಗಳನ್ನು ಭಾರತಕ್ಕೆ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ.

Australia Bans Passenger Flights From India Until May 15

ಇಷ್ಟೇ ಅಲ್ಲದೆ ಬ್ರಟಿನ್, ಕೆನಡಾ, ಅರಬ್‌ ಎಮಿರೇಟ್ಸ್ ಕೂಡ ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನ ಸಂಚಾರವನ್ನು ನಿರ್ಬಂಧಿಸಿವೆ. ಒಂದೊಮ್ಮೆ ವಿಮಾನ ಹಾರಾಟ ನಡೆಸಿದರೆ ಆಸ್ಟ್ರೇಲಿಯಾದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುವ ಅಪಾಯವನ್ನು ಕಡೆಗಣಿಸುವಂತಿಲ್ಲ ಎಂದಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,23,144 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2771 ಜನರು ಸಾವನ್ನಪ್ಪಿದ್ದು, 2,51,827 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಮವಾರ ದೇಶದಲ್ಲಿ 3,52,991 ಕೊರೊನಾ ಸೋಂಕು ದಾಖಲಾಗಿತ್ತು.

ಇಂದು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ದಾಖಲಾದ ಈ ಪ್ರಕರಣಗಳೊಂದಿಗೆ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,82,204 ಆಗಿದೆ.

ದೇಶದಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 1,45,56,209 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,97,894 ಮಂದಿ ಮೃತಪಟ್ಟಿದ್ದಾರೆ. ಜನವರಿ 16ರಿಂದ ಏಪ್ರಿಲ್ 26ರವರೆಗೆ14,52,71,186 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

English summary
Australia on Tuesday announced a temporary ban on direct passenger flights from India, as the South Asian nation grapples with a massive surge in coronavirus infections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X