ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಆಸ್ಟ್ರೇಲಿಯಾದ ವಿಮಾನ ನಿಲ್ದಾಣದಲ್ಲಿ ಅಪರಿಚಿತನಿಂದ ಗುಂಡಿನ ದಾಳಿ

|
Google Oneindia Kannada News

ಕ್ಯಾನ್‌ಬೆರಾ, ಆಗಸ್ಟ್ 14: ಇಲ್ಲಿನ ಕ್ಯಾನ್‌ಬೆರಾ ವಿಮಾನ ನಿಲ್ದಾಣದಲ್ಲಿ ಅಪರಿಚಿತನೊಬ್ಬ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ಚೆಕ್-ಇನ್ ಪ್ರದೇಶದಲ್ಲಿ ಬಂದೂಕುಧಾರಿಯೊಬ್ಬ ಸುಮಾರು ಐದು ಸುತ್ತಿನ ಗುಂಡು ಹಾರಿಸಿದ್ದಾನೆ. ಘಟನೆಯಿಂದ ಕ್ಯಾನ್‌ಬೆರಾ ವಿಮಾನ ನಿಲ್ದಾಣ ಕೆಲ ಕಾಲ ಆತಂಕದ ವಾತಾವರಣ ಉಂಟಾಗಿತ್ತು.

ಆದರೆ, ವಿಮಾನ ನಿಲ್ದಾಣ ಪೊಲೀಸರು ಸಶಸ್ತ್ರಧಾರಿ ದಾಳಿಕೋರನನ್ನು ಬಂಧಿಸಿ, ವಿಚಾರಣೆ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಗುಂಡಿನ ದಾಳಿ ಹಿಂದೆ ಒಬ್ಬನೇ ವ್ಯಕ್ತಿ ಇದ್ದಾನೆ ಎಂದು ಆರಂಭಿಕ ತನಿಖೆಯಿಂದ ತಿಳಿದು ಬಂದಿದೆ.

ಮುಖ್ಯ ಟರ್ಮಿನಲ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದ ವರದಿಗಳ ನಂತರ ವಿಮಾನ ನಿಲ್ದಾಣದ ಎಲ್ಲಾ ಟರ್ಮಿನಲ್ ಬಳಿ ಹೆಚ್ಚಿನ ಪೊಲೀಸ್ ನಿಯೋಜಿಸಲಾಗಿದೆ. ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣವನ್ನು ಲಾಕ್ ಡೌನ್ ಮಾಡಲಾಗಿದೆ.

Breaking: Australia’s Canberra airport evacuated after gunman fires 5 shots, suspect detained

ಘಟನೆಯಿಂದ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್ ಬಳಿ ಒಬ್ಬ ವ್ಯಕ್ತಿ ಪಿಸ್ತೂಲ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದನ್ನು ನೋಡಿದ್ದೇನೆ ಎಂದು ಮಹಿಳೆಯೊಬ್ಬರು ಹೇಳಿದರು. ದಾಳಿ ಮಾಡಿದವನು ಮಧ್ಯವಯಸ್ಕ ಎಂದು ವಿವರಿಸಿದರು. ಸುಮಾರು 5-6 ಗುಂಡು ಹಾರಿಸಲಾಗಿದೆ ಎಂದು ಆಕೆ ಹೇಳಿದರು ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.

Breaking: Australia’s Canberra airport evacuated after gunman fires 5 shots, suspect detained

ಆದರೆ, ಎಷ್ಟು ಸುತ್ತಿನ ಗುಂಡು ಹಾರಿಸಲಾಗಿದೆ ಎಂಬುದರ ವಿವರ ಇನ್ನೂ ಸ್ಪಷ್ಟವಾಗಿಲ್ಲ, ಘಟನೆ ಬಳಿಕ ವಿಮಾನ ನಿಲ್ದಾಣವನ್ನು ಲಾಕ್ ಡೌನ್ ಮಾಡಲಾಗಿದೆ.
English summary
Australia’s Canberra airport was evacuated after a gunman fired five rounds of bullets in the check-in area. Police have detained a suspect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X