ಕಾಳ್ಗಿಚ್ಚಿನ ರೌದ್ರಾವತಾರಕ್ಕೆ ಬೆಚ್ಚಿದ ಆಸ್ಟ್ರೇಲಿಯಾ: ಏಳು ಸಾವು
ಸಿಡ್ನಿ, ಜನವರಿ 2: ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನಲ್ಲಿ ಕಾಡ್ಗಿಚ್ಚು ಅಬ್ಬರದಿಂದ ಜನರು, ಕಾಡುಪ್ರಾಣಿಗಳು ಭಯದಲ್ಲಿ ವಾಸಿಸುವಂತಾಗಿದೆ. ಮುಗಿಲೆತ್ತರಕ್ಕೆ ಆವರಿಸಿರುವ ಬೆಂಕಿಯ ಜ್ವಾಲೆಗಳನ್ನು ನಿಯಂತ್ರಿಸುವ ಪ್ರಯತ್ನ ಸಫಲವಾಗುತ್ತಿಲ್ಲ. ಕಳೆದ 24 ಗಂಟೆಯಲ್ಲಿ ಏಳು ಮಂದಿ ಕಾಳ್ಗಿಚ್ಚಿನ ರೌದ್ರಾವತಾರಕ್ಕೆ ಜೀವ ಕಳೆದುಕೊಂಡಿದ್ದಾರೆ. 7 ದಿನಗಳ ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ನ್ಯೂ ಸೌತ್ ವೇಲ್ಸ್, ಕಾಳ್ಗಿಚ್ಚಿನಿಂದ ಆವೃತವಾಗಿರುವ ಸ್ಥಳಗಳಿಂದ ಜನರನ್ನು ಬಲವಂತವಾಗಿ ಸ್ಥಳಾಂತರ ಮಾಡಲು ನಿರ್ಧರಿಸಿದೆ.
ವಿಕ್ಟೋರಿಯಾ ಗಡಿ ಸಮೀಪದ ಬ್ಯಾಟ್‌ಮನ್ಸ್ ಬೇದಲ್ಲಿರುವ ನ್ಯೂ ಸೌತ್ ವೇಲ್ಸ್ (ಎನ್‌ಎಸ್‌ಡಬ್ಲ್ಯೂ) ಕರಾವಳಿ ಪಟ್ಟಣದಲ್ಲಿ ಗ್ರಾಮೀಣ ಅಗ್ನಿಶಾಮಕ ದಳ ಸೇವೆಯು ಪ್ರವಾಸಿಮಟ್ಟದ ವಲಯವೊಂದನ್ನು ಸ್ಥಾಪಿಸಿದೆ. ಶನಿವಾರದ ಒಳಗೆ ಎಲ್ಲ ಪ್ರವಾಸಿಗರೂ ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದೆ. ಎನ್‌ಎಸ್‌ಡಬ್ಲ್ಯೂ ನವೆಂಬರ್ ಮತ್ತು ಡಿಸೆಂಬರ್‌ಗಳಲ್ಲಿ ಸಹ ತುರ್ತು ಪರಿಸ್ಥಿತಿ ಘೋಷಿಸಿತ್ತು.
ಕಳೆದ 24 ಗಂಟೆಯಲ್ಲಿ ಮಾರಕ ಕಾಳ್ಗಿಚ್ಚಿಗೆ ಆಹುತಿಯಾದವರ ಸಂಖ್ಯೆ ಏಳಕ್ಕೆ ಏರಿದೆ. ಅರಣ್ಯ ಪ್ರದೇಶದ ಭಾಗಗಳಲ್ಲಿ ಅನೇಕ ಸಮುದಾಯಗಳು ಹಂಚಿ ಹೋಗಿರುವುದರಿಂದ ಹಲವು ಕಡೆ ಜನರ ಸ್ಥಳಾಂತರ ಕಷ್ಟಕರವಾಗಿದೆ. ಈ ಭಾಗದಲ್ಲಿ ಅಂತಹ 24 ಪ್ರತ್ಯೇಕ ಸಮುದಾಯಗಳಿವೆ.

ಕಳೆದ ಕೆಲವು ತಿಂಗಳಿನಿಂದ ಆಸ್ಟ್ರೇಲಿಯಾದ ಅನೇಕ ಕಡೆ ಕಾಳ್ಗಿಚ್ಚು ಭಾರಿ ಅನಾಹುತ ಸೃಷ್ಟಿಸಿದೆ. ಈ ಬೆಂಕಿ ಜ್ವಾಲೆಗಳನ್ನು ನಿಯಂತ್ರಿಸುವುದಕ್ಕೆ ಇನ್ನೂ ಹಲವು ಸಮಯ ಬೇಕಾಗಲಿದೆ. ಆಸ್ಟ್ರೇಲಿಯಾದಲ್ಲಿ ಈಗಷ್ಟೇ ಬೇಸಿಗೆ ಆರಂಭವಾಗಿದ್ದು, ಜನವರಿ ಮತ್ತು ಫೆಬ್ರವರಿಯಲ್ಲಿ ತಾಪಮಾನ ಸಾಮಾನ್ಯವಾಗಿ ಅಧಿಕಮಟ್ಟದಲ್ಲಿರಲಿದೆ.
ಇದುವರೆಗೂ ದೇಶದಲ್ಲಿ ಕಾಳ್ಗಿಚ್ಚಿಗೆ 17 ಮಂದಿ ಬಲಿಯಾಗಿದ್ದಾರೆ. ಸುಮಾರು 1,300 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 442 ಮನೆಗಳು ಹಾನಿಗೊಳಗಾಗಿವೆ. ಅಂದಾಜು ಐದು ಮಿಲಿಯನ್ ಹೆಕ್ಟೇರ್ ಭೂಮಿ ಭಸ್ಮವಾಗಿದೆ. ಅನೇಕ ಕಡೆ ಕುರುಚಲು ಗಿಡಗಳಿಂದ ವೇಗವಾಗಿ ವ್ಯಾಪಿಸಿರುವ ಬೆಂಕಿ, ಸಣ್ಣ ಪಟ್ಟಣಗಳನ್ನೇ ಸುಟ್ಟುಹಾಕಿದೆ. ಶನಿವಾರದ ವೇಳೆಗೆ ತಾಪಮಾನ ಹೆಚ್ಚುವ ಸಾಧ್ಯತೆ ಇದ್ದು, ಗಾಳಿಯ ವೇಗ ಕೂಡ ಹೆಚ್ಚುವುದರಿಂದ ಬೆಂಕಿ ಮತ್ತಷ್ಟು ರಭಸವಾಗಲಿದೆ ಎಂದು ಎಚ್ಚರಿಕೆ ನೀಡಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications