ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಗಡಿ ತೆರೆಯಲು ಆಸ್ಟ್ರೇಲಿಯಾ ನಿರ್ಧಾರ

|
Google Oneindia Kannada News

ಸಿಡ್ನಿ, ಫೆಬ್ರವರಿ 7: ಕೊರೊನಾ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಿದ್ದ ಆಸ್ಟ್ರೇಲಿಯಾ ಫೆಬ್ರವರಿ ಕೊನೆ ವಾರದಲ್ಲಿ ವಿದೇಶಿ ಪ್ರವಾಸಿಗರಿಗೆ ತನ್ನ ಗಡಿ ತೆರೆಯಲು ತೀರ್ಮಾನಿಸಿದೆ.

ರಾಷ್ಟ್ರೀಯ ಭದ್ರತಾ ಸಮಿತಿ ಸಭೆ ಬಳಿಕ ಈ ತೀರ್ಮಾನ ಕೈಗೊಂಡಿರುವ ಆಸ್ಟ್ರೇಲಿಯಾ ಸರ್ಕಾರ ಶೀಘ್ರದಲ್ಲಿ ವಿದೇಶಿ ಪ್ರವಾಸಿಗರಿಗೆ ಗಡಿತೆರೆಯಲು ಸರ್ಕಾರ ಯೋಜಿಸಲಾಗಿದೆ ಎಂದು ಅಲ್ಲಿನ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಕರೆನ್‌ ಆಂಡ್ರಯೋಸ್‌, ನಾವು ಆದಷ್ಟು ಬೇಗ ಗಡಿ ತೆರೆಯಲು ಸಿದ್ಧವಾಗಿದ್ದೇವೆ. ಅದಕ್ಕೆ ಅಗತ್ಯ ಮಾಹಿತಿಯನ್ನು ನಾಪು ಸಂಗ್ರಹಿಸುತ್ತಿದ್ದೇವೆ ಎಂದರು. ಫೆಬ್ರವರಿ 21ರಂದು ಗಡಿ ಪ್ರವಾಸಿಗರಿಗೆ ಮುಕ್ತವಾಗಲಿದೆ.

Australia To Reopen Borders To Tourists On Feb 21 After Almost 2 Years

ಆಸ್ಟ್ರೇಲಿಯಾದ ಪ್ರವಾಸೋದ್ಯಮಕ್ಕೆ ವಿಶ್ವದೆಲೆಡೆ ಬೇಡಿಕೆ ಇದ್ದು, ಕೋವಿಡ್‌ ಸಾಂಕ್ರಾಮಿಕ ರೋಗಕ್ಕೂ ಮುನ್ನ ಆಸ್ಟ್ರೇಲಿಯಾ ಪ್ರವಾಸೋದ್ಯಮ ವಾರ್ಷಿಕ 84.9 ಶತಕೋಟಿ ಡಾಲರ್‌ ಆದಾಯ ಗಳಿಸುತ್ತಿತ್ತು. ಆದರೆ ಲಾಕ್‌ ಡೌನ್‌ ನಿಂದ ವಾರ್ಷಿಕ ಲಾಭ ಶೇ.47ರಷ್ಟು ಇಳಿಕೆಯಾಗಿದೆ.

ಭಾರತದಲ್ಲಿ ಕೂಡ ಕಳೆದ ಎರಡು ವರ್ಷದಿಂದ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು 2022ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಹೊರಡಿಸಿರುವ ಆದೇಶದ ಪ್ರಕಾರ, ಕೊರೊನಾ ಪ್ರಕರಣ ವಿಶ್ವದಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಇಂದು ಅಧಿಸೂಚನೆ ಹೊರಡಿಸಿದೆ.

ಕೊರೊನಾ ಮೂರನೇ ಅಲೆ ಭಾರತದಲ್ಲಿ ಈಗಾಗಲೇ ಕಾಣಿಸಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆ ವಿಧಿಸಿದ ನಿರ್ಬಂಧ ವಿಸ್ತರಿಸಲು ನಿರ್ಧರಿಸಿದ್ದು, ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಈ ನಿರ್ಬಂಧವೂ, ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಕಳೆದ ವರ್ಷ ಮಾರ್ಚ್ 25ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಆ ಬಳಿಕ ಡಿಜಿಸಿಎ ಕಳೆದ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಈ ಸಂದರ್ಭ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಇದೀಗ ವಿಶ್ವದ ಹಲವು ದೇಶಗಳು ಮತ್ತೆ ಕೊರೊನಾ ಸೋಂಕಿಗೆ ತತ್ತರಿಸಿದೆ ಹಾಗಾಗಿ ಭಾರತದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆಯ ನಿರ್ಬಂಧವನ್ನು ವಿಸ್ತರಿಸಿದೆ.

Recommended Video

Virat Kohli ಹಾಗು Rohit Sharma ಒಟ್ಟಾಗಿ ಕುಣಿದು ಕುಪ್ಪಳಿಸಿದ್ದೇಕೆ | Oneindia Kannada

ಈ ನಡುವೆ ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಅರಬ್ ಎಮಿರೇಟ್ಸ್, ಯುನೈಟೆಡ್ ಕಿಂಗ್‍ಡಮ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡು ದೇಶಗಳು ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದಾಗಿದೆ.

English summary
Australia will reopen its borders to full vaccinated tourists from February 21, Prime Minister Scott Morrison announced Monday, ending some of the world's strictest and longest-running pandemic travel restrictions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X