ಎಚ್ಚರ..! ಮನುಷ್ಯರ ಮಾಂಸ ತಿನ್ನುವ ಬ್ಯಾಕ್ಟೀರಿಯ ದೇಹ ಸೇರುತ್ತಿದೆ..!

ಮನುಷ್ಯರ ಚರ್ಮ ಸೇರುವ ಕಿಲ್ಲರ್ ಬ್ಯಾಕ್ಟೀರಿಯವೊಂದು, ದೇಹವನ್ನೇ ಕಿತ್ತು ತಿನ್ನುತ್ತಿರುವ ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ ಸಂಶೋಧಕರು. ಆಸ್ಟ್ರೇಲಿಯಾದಲ್ಲಿ ಕಳೆದ ವರ್ಷ ಈ ರೀತಿಯ ಸಮಸ್ಯೆ ಕಾಣಿಸಿಕೊಂಡಿತ್ತು. ಆಗ ವೈದ್ಯರು ರೋಗಿಗಳನ್ನ ತಪಾಸಣೆ ನಡೆಸಿದ್ದರು.

ಸಣ್ಣ ಗಾಯದೊಂದಿಗೆ ಆರಂಭವಾಗುವ ಬ್ಯಾಕ್ಟೀರಿಯದ ದಾಳಿ ಬರುಬರುತ್ತಾ ದೊಡ್ಡದಾಗಿ, ನಂತರ ಸಣ್ಣ ಚೆಂಡಿನ ಆಕಾರಕ್ಕೆ ಅರಳುತ್ತಿತ್ತು. ಕಡೆಗೆ ಇದನ್ನು 'ಬುರುಲಿ ಅಲ್ಸರ್' ಎಂದು ಗುರುತಿಸಿದ್ದರು ಸಂಶೋಧಕರು.

ಮೊದಲೇ ಕೊರೊನಾ ಕಾಟದಿಂದ ಬೆಚ್ಚಿಬಿದಿದ್ದ ಆಸ್ಟ್ರೇಲಿಯಾ ಹೊಸ ರೋಗದಿಂದ ತತ್ತರಿಸಿ ಹೋಗಿತ್ತು. ಆದರೆ ಈ ವಿಚಾರ ಅಷ್ಟಾಗಿ ಸದ್ದು ಮಾಡದೇ ಹೋದರು, ಈಗ ಮಾಂಸ ತಿನ್ನುವ ಬ್ಯಾಕ್ಟೀರಿಯದ ಅಬ್ಬರ ಜೋರಾಗಿದೆ. ನಿತ್ಯ 10-15 ಜನರಲ್ಲಿ ಬುರುಲಿ ಅಲ್ಸರ್ ಕನ್ಫರ್ಮ್ ಆಗುತ್ತಿದೆ. ಆಸ್ಟ್ರೇಲಿಯಾದ ಮೆಲ್ಬರ್ನ್ ಒಳಭಾಗದ ಪ್ರದೇಶಗಳಲ್ಲಿ ಬುರುಲಿ ಅಲ್ಸರ್ ಭೀಕರವಾಗಿ ಹರಡುತ್ತಿದ್ದು, ಇದೀಗ ಹೈಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಸಂಶೋಧನೆ ನಡೆಸುತ್ತಿರುವ ತಜ್ಞರು, ಬ್ಯಾಕ್ಟಿರಿಯಾ ಹರಡುವುದನ್ನು ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದಾರೆ.

Flesh Eating Bacteria Found In Australia

ಹೇಗೆ ಹರಡುತ್ತದೆ ಬ್ಯಾಕ್ಟೀರಿಯ..?
ಕೊರೊನಾ ಕಾಟದಿಂದ ಮುಕ್ತರಾದರೆ ಸಾಕು ಎನ್ನುವಾಗಲೇ ಹೊಸ ಯುದ್ಧ ಆರಂಭವಾಗಿದೆ. ಬುರುಲಿ ಅಲ್ಸರ್ ಹರಡುವ ಬ್ಯಾಕ್ಟೀರಿಯ ಸಾಮಾನ್ಯವಾಗಿ 'ಒಪೊಸಮ್' ಎಂಬ ಉಭಯವಾಸಿಗಳ ಮಲದಲ್ಲಿ ಕಂಡುಬರುತ್ತದೆ. ಆದರೆ ಬ್ಯಾಕ್ಟೀರಿಯ ಮನುಷ್ಯರ ಚರ್ಮಕ್ಕೆ ಅಂಟಿದ್ದು ಹೇಗೆ ಅಂತಾ ಸಂಶೋಧನೆ ಆರಂಭವಾದಾಗ ಸೊಳ್ಳೆಗಳ ಜಾಡು ಸಿಕ್ಕಿದೆ. ಸೊಳ್ಳೆಗಳ ಮೂಲಕ ಮನುಷ್ಯರಿಗೆ ಬ್ಯಾಕ್ಟೀರಿಯ ಹರಡಿರಬಹುದು ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ಸಂಶೋಧನೆಗಳು ಮುಂದುವರಿದಿವೆ. ಮತ್ತೊಂದ್ಕಡೆ 'ಒಪೊಸಮ್' ಪ್ರಾಣಿ ಕಂಡುಬರುವ ದೇಶಗಳು ಅಲರ್ಟ್ ಆಗಿರುವಂತೆ ಆಸ್ಟ್ರೇಲಿಯಾದಿಂದ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಸರ್ಜರಿ ಮಾಡಬೇಕಾಗಿ ಬರಬಹುದು..!
'ಬುರುಲಿ ಅಲ್ಸರ್' ಪ್ರಾಥಮಿಕ ಅಥವಾ ದ್ವಿತೀಯ ಹಂತ ತಲುಪಿರುವಾಗಲೇ ಚಿಕಿತ್ಸೆ ಅಗತ್ಯ. ಇದನ್ನು ಮೀರಿ ಹೋದರೆ ಗಾಯ ಸಣ್ಣ ಚೆಂಡಿನ ಆಕಾರಕ್ಕೆ ತಿರುಗುತ್ತದೆ. ಆ ನಂತರ ಸರ್ಜರಿ ಮಾಡಬೇಕಾಗಿ ಬರಬಹುದೆಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಹಲವರು 'ಬುರುಲಿ ಅಲ್ಸರ್' ಸೋಂಕಿನಿಂದ ಗುಣಮುಖರಾಗಿದ್ದು, ವ್ಯಾಪಕವಾಗಿ ಬ್ಯಾಕ್ಟೀರಿಯ ಹರಡುತ್ತಿರುವುದು ಜನರಲ್ಲಿ ಭಯಮೂಡುವಂತೆ ಮಾಡಿದೆ. ಈಗಾಗಲೇ ಸ್ಥಳೀಯ ಆಡಳಿತ, ಆಸ್ಟ್ರೇಲಿಯಾದ ಸರ್ಕಾರ ಬ್ಯಾಕ್ಟೀರಿಯ ಹರಡದಂತೆ ತಡೆಯಲು ಅಗತ್ಯವಿರುವ ಕ್ರಮ ಕೈಗೊಂಡಿದೆ. ಆದರೂ ಬ್ಯಾಕ್ಟೀರಿಯ ನಿಯಂತ್ರಣ ಅಸಾಧ್ಯವೆಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Flesh Eating Bacteria Found In Australia

ರೋಗ ನಿರೋಧಕ ಶಕ್ತಿ ನಾಶ
ಬ್ಯಾಕ್ಟೀರಿಯ ಚರ್ಮದ ಮೂಲಕ ದೇಹದೊಳಗೆ ಎಂಟ್ರಿಯಾದ ತಕ್ಷಣ ಜೀವಕೋಶಗಳನ್ನ ನಾಶಮಾಡುತ್ತದೆ. ವಿಷಯುಕ್ತ ಪದಾರ್ಥಗಳನ್ನು ಹರಡುವ ಮೂಲಕ ಆ ಜಾಗ ಕೊಳೆಯುವಂತೆ ಮಾಡುತ್ತದೆ. ಹೀಗೆ ದಿನದಿಂದ ದಿನಕ್ಕೆ ಗಾಯ ಹರಡುತ್ತಾ ಹೋಗುತ್ತದೆ. ಇನ್ನು ದೇಹದ ರೋಗ ನಿರೋಧಕ ಶಕ್ತಿಯೂ ಕೆಲಸ ಮಾಡದಂತೆ ಈ ಖತರ್ನಾಕ್ ಬ್ಯಾಕ್ಟೀರಿಯ ಪ್ರಭಾವ ಬೀರುತ್ತದೆ. ಹೀಗಾಗಿಯೇ ವಿಜ್ಞಾನಿಗಳು ಹೆಚ್ಚು ಚಿಂತಾಕ್ರಾಂತರಾಗಿ, 'ಬುರುಲಿ ಅಲ್ಸರ್' ನಿಯಂತ್ರಿಸಲು ಹೆಚ್ಚಿನ ಸಂಶೋಧನೆಯಲ್ಲಿ ತೊಡಗಿದ್ದಾರೆ. ಈವರೆಗೂ 'ಬುರುಲಿ ಅಲ್ಸರ್' ನಿಯಂತ್ರಣಕ್ಕೆ ಅಧಿಕೃತ ಔಷಧ ಸಿಕ್ಕಿಲ್ಲವಾದರೂ, ಈಗಿರುವ ಔಷಧಗಳಿಂದಲೇ ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+