T. Narasipur Elections: ತ್ರಿವೇಣಿ ಸಂಗಮದಲ್ಲಿ ಕಾಂಗ್ರೆಸ್-ಜೆಡಿಎಸ್ ಜಟಾಪಟಿ, ಯಾರ ಕೊರಳಿಗೆ ಗೆಲುವಿನ ಮಾಲೆ?
ಮೈಸೂರು, ಮಾರ್ಚ್ 27: ಕಾವೇರಿ, ಕಪಿಲಾ ಮತ್ತು ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮವಾಗಿರುವ ಟಿ.ನರಸೀಪುರ ಕ್ಷೇತ್ರ ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು. ಮೂರು ನದಿಗಳ ಸಂಗಮ ಸ್ಥಳವಾದ್ದರಿದಲೇ ಈ ಕ್ಷೇತ್ರಕ್ಕೆ ತಿರುಮಕೂಡಲು ಎಂಬ ಹೆಸರು ಕೂಡ ಇದೆ. ತ್ರಿವೇಣಿ ಸಂಗಮದಲ್ಲಿರುವ ಅಗಸ್ತ್ಯೇಶ್ವರ ದೇವಾಲಯ ಹಾಗೂ ಗುಂಜಾ ನರಸಿಂಹಸ್ವಾಮಿ ದೇವಸ್ಥಾನ ಇಲ್ಲಿನ ಪ್ರಮುಖ ಪ್ರೇಕ್ಷಣಿಕ ಸ್ಥಳವಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿ.ನರಸೀಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಸದ್ಯ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿರುವ ಜೆಡಿಎಸ್‌ಗೆ ಸೋಲುಣಿಸಲು ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದರೆ, ಇತ್ತ ಬಿಜೆಪಿ ಕೂಡ ಕ್ಷೇತ್ರದಲ್ಲಿ ಮುನ್ನಲೆಗೆ ಬರುವ ಪ್ರಯತ್ನ ಮಾಡುತ್ತಿದೆ.

ಟಿ.ನರಸೀಪುರ ಕ್ಷೇತ್ರದ ಪ್ರಸ್ತುತ ರಾಜಕರಣ
ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ ಅವರು ಕಳೆದ ಬಾರಿಯ ಸೋಲಿನ ಆಘಾತದಿಂದ ಇನ್ನೂ ಹೊರ ಬಂದಂತೆ ಕಾಣುತ್ತಿಲ್ಲ. ಕಳೆದ ಚುನಾವಣೆಯ ಸೋಲಿನ ಬಳಿಕ ಪಕ್ಷ ಚಟುವಟಿಕೆಯಲ್ಲಿ ಅಷ್ಟೇನು ಕಾಣಿಸಿಕೊಳ್ಳದ ಎಚ್.ಸಿ.ಮಹದೇವಪ್ಪ ತಮ್ಮ ಪುತ್ರ ಸುನೀಲ್ ಬೋಸ್ ಅವರಿಗೆ ಕ್ಷೇತ್ರ ಬಿಟ್ಟುಕೊಡುವ ಯೋಜನೆಯಲ್ಲಿದ್ದರು. ಆದರೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಟಿಕೆಟ್ ನೀಡಿದೆ.
ಎಚ್.ಸಿ.ಮಹದೇವಪ್ಪ ಚುನಾವಣೆಗೆ ಇನ್ನೇನು ತಿಂಗಳು ಇರುವಾಗ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದನ್ನು ಗಮನಿಸಿದರೆ ಮತ್ತೆ ತಿ.ನರಸೀಪುರದಲ್ಲಿ ಜೆಡಿಎಸ್‌ಅನ್ನು ಬದಿಗೆ ಸರಿಸಿ ಕಾಂಗ್ರೆಸ್ ಪಕ್ಷವನ್ನು ಪ್ರತಿಷ್ಠಾಪಿಸಲೇ ಬೇಕು ಎನ್ನುವ ಹಠಕ್ಕೆ ಬಿದ್ದಂತೆ ಕಾಣಿಸುತ್ತಿದೆ.

ಜೆಡಿಎಸ್‌ನಲ್ಲಿ ಹಾಲಿ ಶಾಸಕ ಅಶ್ವಿನ್ ಕುಮಾರ್ ಅವರಿಗೆ ಟಿಕೆಟ್ ನೀಡಿರುವ ಕಾರಣ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಳೆದ ಚುನಾವಣೆಯ ಗೆಲುವಿನ ಬಳಿಕ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿಕೊಂಡ ಅಶ್ವಿನ್ ಕುಮಾರ್ ಸದ್ಯ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ಕ್ಷೇತ್ರ ಕೈತಪ್ಪ ಬಾರದು ಎನ್ನುವ ಪ್ರಯತ್ನದಲ್ಲಿದ್ದಾರೆ.
ಇನ್ನು ಕಳೆದ ಚುನಾವಣೆಯನ್ನು ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದೆ. ಆದರೂ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯಿಂದ ಕಣಕ್ಕಿಳಿಯಲು ಮಾಜಿ ಶಾಸಕ ಎಲ್.ಎನ್. ಭಾರತಿ ಶಂಕರ್, ನಿಲಸೋಗೆಯ ಬಿಜೆಪಿ ಮುಖಂಡ ದಿ.ಪುಟ್ಟಬಸವಯ್ಯ ಸೋದರ ಸಂಬಂಧಿ ವೈದ್ಯ ಡಾ.ರೇವಣ್ಣ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬೆಂಬಲಿತ ಕನಕಪುರ ಎಸ್.ಅರವಿಂದ, ಸಾಮ್ರಾಟ್ ಸುಂದರೇಶನ್ ಮತ್ತು ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್ ಹೀಗೆ ಟಿ.ನರಸೀಪುರ ಕ್ಷೇತ್ರದಿಂದ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೂಡ ಸ್ಪರ್ಧಿಸುತ್ತಿದ್ದು, ಸಿದ್ದರಾಜುಗೆ ಆಪ್ ಟಿಕೆಟ್ ನೀಡಲಾಗಿದೆ.
ಟಿ.ನರಸೀಪುರ ವಿಧಾನಸಭಾ ಚುನಾವಣಾ 2018ರ ಫಲಿತಾಂಶ
2018 ಚುನಾವಣೆಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಎಂ. ಅಶ್ವಿನ್ ಕುಮಾರ್ ಸ್ಪರ್ಧಿಸಿದ್ದು, 83,929 ಮತಗಳನ್ನು ಪಡೆದಿದ್ದರು. ಇನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಎಚ್ ಸಿ ಮಹದೇವಪ್ಪ 55,451 ಮತಗಳನ್ನು ಪಡೆದು 28,478 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
ಟಿ.ನರಸೀಪುರ ಕ್ಷೇತ್ರದ ಮತದಾರರ ವಿವರ
ಒಟ್ಟು ಮತದಾರರು - 1,98,434,
ಪುರುಷ ಮತದಾರರು - 98,830
ಮಹಿಳಾ ಮತದಾರರು - 99,591
T. Narasipur Karnataka Elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2018 | ಎಂ. ಅಶ್ವಿನ್ ಕುಮಾರ್ (ಜೆಡಿಎಸ್) | 83,929 | ಡಾ. ಎಚ್.ಸಿ. ಮಹದೇವಪ್ಪ(ಕಾಂಗ್ರೆಸ್) | 55,451 |
| 2013 | ಡಾ. ಎಚ್.ಸಿ. ಮಹದೇವಪ್ಪ(ಕಾಂಗ್ರೆಸ್) | 53,219 | ಎಂ.ಸಿ. ಸುದರ್ಶನ್ (ಜೆಡಿಎಸ್) | 52,896 |
| 2008 | ಡಾ. ಎಚ್.ಸಿ. ಮಹದೇವಪ್ಪ(ಕಾಂಗ್ರೆಸ್) | 42,593 | ಎಂ.ಸಿ. ಸುದರ್ಶನ್ (ಜೆಡಿಎಸ್) | 28,869 |
ಜಾತಿವಾರು ವಿವರ
ಎಸ್ಸಿ- 53,205
ಎಸ್ಪಿ- 27,110
ಮುಸ್ಲಿಂ - 12,729 ಹಾಗೂ ಉಳಿದಂತೆ ಇತರ ಸಮುದಾಯದ ಮತಗಳಿವೆ.
-
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications