ಕೇರಳ; 2001ರ ಬಳಿಕ ಹೆಚ್ಚು ಮಹಿಳಾ ಅಭ್ಯರ್ಥಿಗಳು ಆಯ್ಕೆ

ತಿರುವನಂತಪುರಂ, ಮೇ 04; ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಆಡಳಿತಾರೂಢ ಎಲ್‌ಡಿಎಫ್ 94 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಾಣ ಮಾಡಿದೆ.

2001ರ ಬಳಿಕ ಇದೇ ಮೊದಲ ಬಾರಿಗೆ ಕೇರಳ ವಿಧಾನಸಭೆಯಲ್ಲಿ ಮಹಿಳಾ ಶಾಸಕಿಯರ ಸಂಖ್ಯೆ ಎರಡು ಅಂಕಿಗೆ ಬಂದಿದೆ. 140 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ 6ರಂದು ನಡೆದ ಚುನಾವಣೆಯಲ್ಲಿ 11 ಶಾಸಕಿಯರು ಆಯ್ಕೆಯಾಗಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ 2021ರ ಚುನಾವಣೆಯಲ್ಲಿ 103 ಮಹಿಳಾ ಅಭ್ಯರ್ಥಿಗಳು ವಿವಿಧ ಪಕ್ಷಗಳಿಂದ ಕಣಕ್ಕಿಳಿದಿದ್ದರು. ಇವರಲ್ಲಿ 11 ಅಭ್ಯರ್ಥಿಗಳು ಜಯಗಳಿಸಿದ್ದಾರೆ.

 11 Women Candidates Enter Kerala Assembly After 2001

1996ರಲ್ಲಿ ವಿಧಾನಸಭೆಯಲ್ಲಿ 13 ಮಹಿಳಾ ಶಾಸಕಿಯರು ಇದ್ದರು. 2016ರಲ್ಲಿ ಈ ಸಂಖ್ಯೆ 8ಕ್ಕೆ ಇಳಿಕೆಯಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಎಲ್‌ಡಿಎಫ್‌ನ 10 ಮಹಿಳೆಯರು, ಯುಡಿಎಫ್‌ನಿಂದ ಒಬ್ಬರು ಆಯ್ಕೆಯಾಗಿದ್ದಾರೆ.

ರಾಜ್ಯದ ಆರೋಗ್ಯ ಸಚಿವೆಯಾದ ಕೆಕೆ ಶೈಲಜಾ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ಕ್ಷೇತ್ರದಿಂದ ದಾಖಲೆಯ 60,963 ಮತಗಳ ಅಂತರದಿಂದ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.

ವೀಣಾ ಜಾರ್ಜ್‌, ಸಿ. ಕೆ. ಆಶಾ ಮತ್ತು ಯು. ಪ್ರತಿಭಾ ಅವರು ಸಹ 2ನೇ ಬಾರಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದಾರೆ. ಕಾಂಗ್ರೆಸ್‌ನ ಪಿ. ಕೆ. ಜಯಲಕ್ಷ್ಮೀ, ಉಸ್ಮಾನ್, ಬಿಂದು ಕೃಷ್ಣಾ, ಬಿಜೆಪಿಯ ಶೋಭಾ ಸುರೇಂದ್ರನ್ ಸೋಲು ಕಂಡಿದ್ದಾರೆ.

ಎನ್‌ಡಿಎ ಮೈತ್ರಿಕೂಟ ಕೇರಳ ವಿಧಾನಸಭೆಗೆ ದಾಖಲೆಯ ಅಂದರೆ 20 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಒಂದೂ ಸ್ಥಾನದಲ್ಲಿ ಗೆದ್ದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+