• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುನ್ನಾರ್‌ನಲ್ಲಿ ಭೂಕುಸಿತ 15 ಮಂದಿ ಸಾವು, 50 ಮಂದಿ ನಾಪತ್ತೆ

|

ತಿರುವನಂತಪುರಂ, ಆಗಸ್ಟ್ 08: ಮುನ್ನಾರ್‌ನಲ್ಲಿ ಭೂಕುಸಿತ ಉಂಟಾಗಿದ್ದು, 16 ಮಂದಿ ಮೃತಪಟ್ಟಿದ್ದು, 50 ಮಂದಿ ಕಾಣೆಯಾಗಿದ್ದಾರೆ.

ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.

ಇನ್ನು ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿದ್ದು ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗ ತಲುಪಲು ಸಾಧ್ಯವಾಗಿಲ್ಲ.

ಕೊಡಗಿನಲ್ಲಿ ನಿಲ್ಲದ ಗಾಳಿ ಮಳೆ: ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ

ಇದುವರೆಗೆ 15 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ.

ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೇರಳಕ್ಕೆ ತೆರಳಿ ಅಲ್ಲಿಯ ಜನರಿಗೆ ಸಹಾಯ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.

English summary
At least 15 people have been killed after heavy rain caused a landslide in Kerala's Idukki district early this morning, Chief Minister Pinarayi Vijayan said Friday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X