ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ: ಒಂದೇ ಟ್ಯೂಷನ್ ಕೇಂದ್ರದ 90 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

|
Google Oneindia Kannada News

ತಿರುವನಂತಪುರಂ,ಫೆಬ್ರವರಿ 10: ಒಂದೇ ಟ್ಯೂಷನ್ ಕೇಂದ್ರಕ್ಕೆ ಹೋಗುತ್ತಿದ್ದ 90 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದಲ್ಲಿ ಹತ್ತನೇ ತರಗತಿಯ 192 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಅದರಲ್ಲಿ 90 ವಿದ್ಯಾರ್ಥಿಗಳು ಒಂದೇ ಟ್ಯೂಷನ್ ಕೇಂದ್ರಕ್ಕೆ ಹೋಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕರ್ನಾಟಕಕ್ಕೆ ಬರುವ ಕೇರಳ ವಿದ್ಯಾರ್ಥಿಗಳಿಗೆ ಸೂಚನೆಕರ್ನಾಟಕಕ್ಕೆ ಬರುವ ಕೇರಳ ವಿದ್ಯಾರ್ಥಿಗಳಿಗೆ ಸೂಚನೆ

ಇದೀಗ ಟ್ಯೂಷನ್ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗಿದೆ. ಆ ಟ್ಯೂಷನ್ ಕೇಂದ್ರಕ್ಕೆ ತೆರಳುತ್ತಿದ್ದ ಉಳಿದ ವಿದ್ಯಾರ್ಥಿಗಳಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ ಎಂದು ಶಿಕ್ಷಣ ಅಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

90 Kerala Students Who Tested Positive Went To Same Tuition Centre

ಅದೇ ಟ್ಯೂಷನ್ ಕೇಂದ್ರಕ್ಕೆ ತೆರಳುತ್ತಿದ್ದ ಉಳಿದ ವಿದ್ಯಾರ್ಥಿಗಳ ಕೊರೊನಾ ಪರೀಕ್ಷೆ ಇಂದು ನಡೆಯಲಿದೆ. ಈ ಟ್ಯೂಷನ್ ಕೇಂದ್ರಕ್ಕೆ ಸೇರಿದ ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲರ ಪರೀಕ್ಷೆ ಬಳಿಕ ಮಾಹಿತಿ ಲಭ್ಯವಾಗಲಿದೆ ಎಂದರು.

ಕೇರಳದಿಂದ ಕರ್ನಾಟಕದ 5 ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ತರಬೇಕು. ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಮೊದಲಿನ ಕೋವಿಡ್ ನೆಗೆಟೀವ್ ಪ್ರಮಾಣ ಪತ್ರ ತರಬೇಕು.

ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ 15 ದಿನಕ್ಕೊಮ್ಮೆ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

English summary
Days after 192 Class 10 students from two schools in Kerala's Malappuram tested positive for COVID-19, a district education officer has said that 91 attended a common tuition centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X