ಅತ್ಯಾಚಾರ ಪ್ರಕರಣ: ನಟ ವಿಜಯ್ ಬಾಬು ಪಾಸ್ ಪೋರ್ಟ್ ಜಪ್ತಿ?
ತಿರುವನಂತಪುರಂ/ದುಬೈ, ಮೇ 1: ಅತ್ಯಾಚಾರ, ಲೈಂಗಿಕ ಕಿರುಕಳ ಪ್ರಕರಣದಲ್ಲಿ ಸಿಲುಕಿರುವ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ಪಾಸ್ ಪೋರ್ಟ್ ಜಪ್ತಿ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಸದ್ಯ ದುಬೈನಲ್ಲಿರುವ ವಿಜಯ್ ಅವರನ್ನು ವಿಚಾರಣೆಗಾಗಿ ಭಾರತಕ್ಕೆ ಕರೆಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ.
ದುಬೈನಲ್ಲಿದ್ದುಕೊಂಡೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ಬಾಬು ಅವರು ವಕೀಲ ಎಸ್ ರಾಜೀವ್ ಸಲ್ಲಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿಯಾದ್ ರಹಮಾನ್ ಎ ಎ, ನ್ಯಾಯಾಲಯಗಳ ಬೇಸಿಗೆ ರಜೆ ಮುಗಿದ ಬಳಿಕ ಅರ್ಜಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕವಾಗಿ ನಡೆದ ಮಾಧ್ಯಮ ವಿಚಾರಣೆ ಮತ್ತು ಊಹಾಪೋಹಗಳಿಂದ ಪೊಲೀಸರು ಪ್ರಚೋದಿತರಾಗಿದ್ದಾರೆ. ಹಾಗಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 438ರ ಅಡಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ವಿಜಯ್ ಅರ್ಜಿಯಲ್ಲಿ ತಿಳಿಸಿದ್ದಾರೆ.

ನಟನೆಗೆ ಅವಕಾಶ ನೀಡುವ ನೆಪದಲ್ಲಿ ತನ್ನನ್ನು ಬಾಬು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಚೊಚ್ಚಲ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ನಟಿಯೊಬ್ಬರು ಮೀ ಟೂ ಆರೋಪ ಮಾಡಿದ್ದರು. ಇದನ್ನು ಆಧರಿಸಿ ಬಾಬು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಬಾಬು ತಲೆಮರೆಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಇದೇ ವೇಳೆ ಫೇಸ್‌ಬುಕ್ ನೇರಪ್ರಸಾರದ ಮೂಲಕ ತನ್ನ ವಿರುದ್ಧದ ಆರೋಪ ನಿರಾಕರಿಸಿದ್ದಾರೆ. ಆದರೆ ಈವೇಳೆ ಸಂತ್ರಸ್ತೆಯ ಹೆಸರನ್ನು ಬಹಿರಂಗಪಡಿಸಿದ ಆರೋಪ ವಿಜಯ್ ಮೇಲೆ ಕೇಳಿ ಬಂದಿದೆ. ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 228 ಎ ಅಡಿ ಕೂಡ ಪ್ರಕರಣ ದಾಖಲಿಸಲಾಗಿದೆ. ಭಾರಿ ಪ್ರತಿರೋಧದ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ ವೀಡಿಯೊವನ್ನು ಅವರು ಫೇಸ್‌ಬುಕ್ ಖಾತೆಯಿಂದ ಅಳಿಸಿಹಾಕಿದ್ದಾರೆ. ಕೆಲ ವರ್ಷಗಳ ಹಿಂದೆ ಎಂದು ನಟ ಮತ್ತು ಸಹ ನಿರ್ಮಾಪಕ ಸಾಂಡ್ರಾ ಥಾಮಸ್ ಅವರು ಬಾಬು ವಿರುದ್ಧ ಹಲ್ಲೆಯ ಆರೋಪ ಮಾಡಿದ್ದರು. ಆದರೆ ಆಗ ದೂರನ್ನು ಹಿಂಪಡೆಯಲಾಗಿತ್ತು.
2018ರಿಂದ ನಟರಾಗಿ ಕೂಡಾ ವಿಜಯ್ ಬಾಬು ಕಾಣಿಸಿಕೊಂಡಿದ್ದಾರೆ. ದೂರು ನೀಡಿರುವ ನಟಿ ಜೊತೆ 2021ರ ನಂತರ ಚಾಟ್ ಮಾಡಿಲ್ಲ, ಆಕೆ ನನ್ನ ಫ್ಲಾಟಿಗೆ ಬಂದಿದ್ದು ನಿಜ, ಆಡಿಷನ್ ಮುಗಿದ ಬಳಿಕ ಆಕೆಗೆ ನಟನೆಗೆ ಸೂಕ್ತ ಅವಕಾಶ ಕಲ್ಪಿಸಲಾಗಿತ್ತು. ಅದು ಬಿಟ್ಟರೆ, ಈ ಕಾಸ್ಟಿಂಗ್ ಕೋಚ್ ಆರೋಪ, ಮೀಟೂ ಆರೋಪ ಎಲ್ಲವೂ ಸುಳ್ಳು ಎಂದಿದ್ದಾರೆ.
ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (AMMA) ಈ ಘಟನೆ ಬಗ್ಗೆ ತನ್ನ ವರದಿಯನ್ನು ಸಲ್ಲಿಸಿದೆ. ವಿಜಯ್ ಬಾಬು ವಿರುದ್ಧ ಯಾವ ರೀತಿ ಕ್ರಮ ಜರುಗಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ನಟಿ ಶ್ವೇತಾ ಮೆನನ್ ಹೇಳಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications