ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ; 300 ಹಂದಿಗಳನ್ನು ಕೊಲ್ಲಲು ನಿರ್ದೇಶನ

|
Google Oneindia Kannada News

ವಯನಾಡ್, ಜುಲೈ 22: ಕೇರಳದಲ್ಲಿ ಮತ್ತೊಮ್ಮೆ ಆಫ್ರಿಕನ್ ಹಂದಿ ಜ್ವರ ಸುದ್ದಿ ಮಾಡಿದೆ. ರಾಜ್ಯದ ವಯನಾಡ್ ಜಿಲ್ಲೆಯ ಮಾನಂತವಾಡಿಯ ಎರಡು ತೋಟಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಭೋಪಾಲ್‌ನಲ್ಲಿ ಇರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ನಲ್ಲಿ ಮಾದರಿಗಳ ಪರೀಕ್ಷೆಗೆ ರವಾನಿಸಲಾಗಿತ್ತು. ಈ ಮಾದರಿ ಪರೀಕ್ಷೆಯಲ್ಲಿ ವಯನಾಡ್ ಜಿಲ್ಲೆಯ ಎರಡು ಫಾರ್ಮ್‌ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ.

ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಹಿನ್ನೆಲೆ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

African swine fever has been reported in Kerala Wayanad district

"ಈಗ ಪರೀಕ್ಷಾ ಫಲಿತಾಂಶದಲ್ಲಿ ಸೋಂಕು ದೃಢಪಟ್ಟಿದೆ. ಎರಡನೇ ಫಾರ್ಮ್‌ನ 300 ಹಂದಿಗಳನ್ನು ಕೊಲ್ಲಲು ನಿರ್ದೇಶನಗಳನ್ನು ನೀಡಲಾಗಿದೆ," ಎಂದು ಅಧಿಕಾರಿ ಹೇಳಿದರು.

ಕೇರಳದಲ್ಲಿ ಹಂದಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮ: ಕೇರಳದಲ್ಲಿ ಹಂದಿ ಜ್ವರದ ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಿಹಾರ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಕೇಂದ್ರದ ಎಚ್ಚರಿಕೆ ನೀಡಿತ್ತು.

ಇದರ ನಂತರ ಕೇರಳದಲ್ಲಿ ಈ ತಿಂಗಳ ಆರಂಭದಲ್ಲಿ ಜೈವಿಕ-ಸುರಕ್ಷತಾ ಕ್ರಮಗಳನ್ನು ಬಿಗಿಗೊಳಲಾಗಿತ್ತು. ಏಕೆಂದರೆ ಆಫ್ರಿಕನ್ ಹಂದಿ ಜ್ವರವು ದೇಶೀಯ ಹಂದಿಗಳ ಮೇಲೆ ಪರಿಣಾಮ ಬೀರುವ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ವೈರಲ್ ಕಾಯಿಲೆಯಾಗಿದೆ.

Recommended Video

Basavaraj Bommai ನನ್ನ ಅಣ್ಣ ಇದ್ದಂಗೆ...ನನ್ಮೇಲೆ ಸಿಡುಕೋ ಹಕ್ಕು ಅವರಿಗಿದೆ ಎಂದ ಪ್ರತಾಪ್ ಸಿಂಹ | Oneindia

English summary
African swine fever has been reported in Kerala Wayanad district. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X