ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏರ್ ಇಂಡಿಯಾ ವಿಮಾನ ದುರಂತ: 14 ಸಾವು, 123ಕ್ಕೂ ಹೆಚ್ಚು ಮಂದಿ ಗಾಯ

|
Google Oneindia Kannada News

ತಿರುವನಂತಪುರಂ, ಆಗಸ್ಟ್.07: ಕೇರಳದ ದುಬೈ-ಕೋಳಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಏರ್ ಇಂಡಿಯಾ ವಿಮಾನದಲ್ಲಿದ್ದ 123 ಪ್ರಯಾಣಿರು ಗಾಯಗೊಂಡಿದ್ದು, ಈ ಪಾಕಿ 15 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

Recommended Video

Kerala Flight Crash ನಂತರ ಮತ್ತೆ ನೆನಪಾಯ್ತು Mangalore ದುರಂತ | Oneindia Kannada

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಕರಿಪುರ್ ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ವಿಮಾನ ದುರಂತದಲ್ಲಿ ಗಾಯಗೊಂಡವರನ್ನು 15ಕ್ಕೂ ಹೆಚ್ಚು ಆಂಬುಲೆನ್ಸ್ ಗಳಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗುತ್ತಿದೆ.

Air India Flight Crash: More Than 14 Passengers Death, 123 Passengers Injured

ಕೋಳಿಕ್ಕೋಡ್ ಗೆ ಬಂದ ವಿಮಾನದ ಪೈಲಟ್ ಆಗಿದ್ದವರು ಅನುಭವಿ ದೀಪಕ್ ಸಾಥೆಕೋಳಿಕ್ಕೋಡ್ ಗೆ ಬಂದ ವಿಮಾನದ ಪೈಲಟ್ ಆಗಿದ್ದವರು ಅನುಭವಿ ದೀಪಕ್ ಸಾಥೆ

10 ಶಿಶುಗಳು, ಆರು ಸಿಬ್ಬಂದಿ, ಇಬ್ಬರು ಪೈಲೆಟ್ ಗಳು ಹಾಗೂ 174 ಪ್ರಯಾಣಿಕರಿದ್ದ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಸ್ಕಿಡ್ ಆಗಿತ್ತು. ಆದರೆ ರನ್ ವೇನಲ್ಲಿ ಲ್ಯಾಂಡಿಂಗ್ ವೇಳೆ ಯಾವುದೇ ರೀತಿಯ ಬೆಂಕಿ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.

ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ

ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವೀಟ್:

ಕರಿಪುರ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ದುಬೈ-ಕೋಳಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಿಮಾನ ದುರಂತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

English summary
Air India Flight Crash: More Than 14 Passengers Death, 123 Passengers Injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X