ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ದೇಗುಲ ಹೋರಾಟಕ್ಕೆ ಮೊದಲ ಬಲಿ: ಬಿಜೆಪಿ ಪ್ರತಿಭಟನೆ ತೀವ್ರ

|
Google Oneindia Kannada News

Recommended Video

ಶಬರಿಮಲೆ ದೇಗುಲ ಹೋರಾಟಕ್ಕೆ ಮೊದಲ ಬಲಿ: ಬಿಜೆಪಿ ಪ್ರತಿಭಟನೆ ತೀವ್ರ..! | Oneindia Kannada

ತಿರುವನಂತಪುರಂ, ಡಿಸೆಂಬರ್ 14: ಶಬರಿ ದೇಗುಲ ಸುತ್ತಮುತ್ತ ಪೊಲೀಸರು ಹೇರಿರುವ ನಿರ್ಬಂಧ ಕ್ರಮಗಳ ತೆರವಿಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವ್ಯಕ್ತಿಯೊಬ್ಬ ಆತ್ಮಾಹುತಿ ಮಾಡಿಕೊಂಡಿದ್ದು, ಶುಕ್ರವಾರ ಬಿಜೆಪಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ.

ಮೃತ ವ್ಯಕ್ತಿಯನ್ನು ಮುತ್ತಡದ ಆಟೋ ಚಾಲಕ ವೇಣುಗೋಪಾಲ್ ನಾಯರ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ತನ್ನ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದ್ದರೂ ಅಯ್ಯಪ್ಪ ಭಕ್ತನ ಸಾವಿಗೆ ರಾಜ್ಯ ಸರ್ಕಾರ ಕಾರಣ ಎಂದು ಆರೋಪಿಸಿರುವ ಬಿಜೆಪಿ, ಶುಕ್ರವಾರ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ.

ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ

ಆದರೆ ವೇಣುಗೋಪಾಲನ್ ಸಾವಿಗೂ ಶಬರಿಮಲೆ ಸುತ್ತ ಹೇರಲಾದ ನಿರ್ಬಂಧಕ್ಕೂ ಸಂಬಂಧವಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ವಿವಿಧ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಶಬರಿಮಲೆ ಸುತ್ತಮುತ್ತಲೂ ಹಲವು ದಿನಗಳ ಕಾಲ ಭಾರೀ ಪ್ರತಿಭಟನೆ ನಡೆಸಿದ್ದವು. ಅಲ್ಲದೆ ದೇಗುಲ ಪ್ರವೇಶಕ್ಕೆ ಆಗಮಿಸಿದ್ದ ಹಲವು 10-50 ವರ್ಷದ ಮಹಿಳೆಯರನ್ನು ಹಿಂದಕ್ಕೆ ಕಳುಹಿಸಿತ್ತು.

BJP calls for dawn to dusk strike; shops and schools remain shut

ಇದೀಗ ಕೇರಳದಲ್ಲಿ ಬಿಜೆಪಿ ಹರತಾಳ ಆರಂಭವಾಗಿದೆ. ಸಮೂಹ ಸಾರಿಗೆ ಸಂಪೂರ್ಣ ಬಂದ್ ಆಗಿದ್ದು ಕೇವಲ ಖಾಸಗಿ ವಾಹನಗಳು ಮಾತ್ರ ಸಂಚರಿಸುತ್ತಿವೆ. ಗುರುವಾರ ನಿರ್ಬಂಧ ತೆರವಿಗೆ ಒತ್ತಾಯಿಸಿ ಬಿಜೆಪಿ ನಾಯಕ ಪದ್ಮನಾಭನ್ ವಿಧಾನಸಭೆ ಸಮೀಪವೇ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

 ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ? ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?

ಗುರುವಾರ ಬೆಳಗಿನ ಜಾವ 2 ಗಂಟೆಗೆ ಪ್ರತಿಭಟನಾ ಸ್ಥಳಕ್ಕೆ ವೇಣುಗೋಪಾಲನ್ ಬದಿದ್ದ, ಅಲ್ಲಿ ಬಿಜೆಪಿ ಕಾರ್ಯಕರ್ತರ ಬಳಿ ತಾನು ಅಯ್ಯಪ್ಪನ ಭಕ್ತನಾಗಿದ್ದು, ದೇವರಿಗೋಸ್ಕರ ಪ್ರಾಣ ಬಿಡಲೂ ಸಿದ್ಧ ಎಂದು ಹೇಳಿದ್ದ, ಆದರೆ ಆ ಸಮಯದಲ್ಲಿ ಯಾರೂ ತಲೆ ಕೆಡಿಸಿಕೊಂಡಿರಲಿಲ್ಲ. ಬಳಿಕ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ .

 ತಿರುವನಂತಪುರಂನಲ್ಲಿ ನಡೆದ ಶಬರಿಮಲೆ ಸಂರಕ್ಷಣಾ ಪಾದಯಾತ್ರೆಯಲ್ಲಿ ಕರಾವಳಿಯ ಬಿಜೆಪಿ ಶಾಸಕರು ತಿರುವನಂತಪುರಂನಲ್ಲಿ ನಡೆದ ಶಬರಿಮಲೆ ಸಂರಕ್ಷಣಾ ಪಾದಯಾತ್ರೆಯಲ್ಲಿ ಕರಾವಳಿಯ ಬಿಜೆಪಿ ಶಾಸಕರು

ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದೀಗ ಪ್ರತಿಭಟನೆ ಕಾವು ಇನ್ನಷ್ಟು ಜೋರಾಗಿದೆ. ಹಿಂಸಾಚಾರ ಘಟನೆಗಳು ವರದಿಯಾಗುವ ಸಾಧ್ಯತೆಗಳಿವೆ. ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.

English summary
After a man who self-immolated in Kerala Thursday died, Bhartiya Janata Party in the state has called for a state-wide dawn to dusk hartal on Friday. Forty-two-year-old Venugopalan Nair set himself ablaze near the BJP’s Sabarimala protest venue in Thiruvananthapuram. He suffered 90 per cent burn injuries and died while he was being treated at a hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X