• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಬಿಜೆಪಿ-ಕಾಂಗ್ರೆಸ್ ಯಾವುದೂ ಬಹುಮತ ಪಡೆಯೋಲ್ಲ"

|

ತಿರುವನಂತಪುರಂ, ಮೇ 07: "ಲೋಕಸಭೆ ಚುನಾವಣೆಯ ನಂತರ ಬಿಜೆಪಿಯಾಗಲೀ, ಕಾಂಗ್ರೆಸ್ ಪಕ್ಷವಾಗಲೀ ಬಹುಮತ ಪಡೆಯುವುದಿಲ್ಲ" ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭವಿಷ್ಯ ನುಡಿದಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ ಮುಖಂಡ ಕೆ ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ ತಮ್ಮ ಚರ್ಚೆಯ ಕುರಿತು ಪತ್ರಕರ್ತರೊಂದಿಗೆ ವಿಜಯನ್ ಮಾತನಾಡುತ್ತಿದ್ದರು.

ಎಚ್ಡಿಕೆ-ಕೆಸಿಆರ್ ಮಾತುಕತೆ: ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ?

"ಎನ್ ಡಿಎ ಮತ್ತು ಯುಪಿಎ ಮೈತ್ರಿಕೂಟಗಳೂ ಬಹುಮತ ಪಡೆಯಲಾರವು. ಆದ್ದರಿಂದ ಪ್ರಾದೇಶಿಕ ಪಕ್ಷಗಳ ಸಹಾಯ ಅವರಿಗೆ ಬೇಕೇ ಬೇಕಾಗುತ್ತದೆ" ಎಂದು ವಿಜಯನ್ ಹೇಳಿದರು.

ಈಗಾಗಲೆ ಕೆಸಿಆರ್ ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಸಿಪಿಐಎಂ ಮುಖಂಡ ವಿಜಯನ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಜೊತೆಗೆ ಸದ್ಯದಲ್ಲೇ ಡಿಎಂಕೆ ಮುಖಂಡ ಎಂ ಕೆ ಸ್ಟಾಲಿನ್ ಅವರನ್ನೂ ಕೆಸಿಆರ್ ಭೇಟಿಯಾಗಲಿದ್ದಾರೆ.

ಸಂಯುಕ್ತ ರಂಗದ ಸೃಷ್ಟಿ ಹಿಂದೆ ಕೆಸಿಆರ್ ಪ್ರಧಾನಿ ಪಟ್ಟದ ಕನಸು...

"ನಾವು ಪ್ರಧಾನಿ ಯಾರಾಗಬೇಕು ಎಂಬ ಬಗ್ಗೆ ಇದುವರೆಗೂ ಮಾತುಕತೆ ನಡೆಸಿಲ್ಲ. ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಪಾತ್ರ ವಹಿಸಲಿರುವುದರಿಂದ ಪ್ರಧಿ ಯಾರಾಗಬೇಕು ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ" ಎಂದು ಕೆಸಿಆರ್ ಹೇಳಿದರು.

English summary
A day after meeting TRS chief and Telangana CM K Chandrashekhar Rao, Kerala Chief Minister P Vijayan said that the interaction was significant and both leaders discussed the national political scenario.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X