ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಸ್ಟರ್ ಅಭಯಾ ಸಾವು ಕೇಸ್: ಫಾದರ್ ಥಾಮಸ್, ಸೆಫಿ ದೋಷಿ

|
Google Oneindia Kannada News

ತಿರುವನಂತಪುರಂ, ಡಿ. 22: ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನ ಸಿಬಿಐ ವಿಶೇಷ ನ್ಯಾಯಾಲಯವು ಮಂಗಳವಾರದಂದು ತೀರ್ಪು ಪ್ರಕಟಿಸಿದೆ. ಪ್ರಮುಖ ಆರೋಪಿಗಳಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರೂ ತಪ್ಪಿತಸ್ಥರು ಎಂದು ತೀರ್ಪು ಬಂದಿದೆ. ಡಿಸೆಂಬರ್ 23ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

1992ರ ಮಾರ್ಚ್ 27ರಂದು ಕೊಟ್ಟಾಯಂ ಪಯಸ್ ಟೆನ್ತ್ ಕಾನ್ವೆಂಟ್‌ನ ಬಾವಿಯಲ್ಲಿ 19 ವರ್ಷ ವಯಸ್ಸಿನ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.

ಆದರೆ ಅಂದಿನ ಕೊಟ್ಟಾಯಂ ನಗರಸಭೆ ಚೇರ್ಮನ್ ಪಿಸಿ ಚೆರಿಯನ್ ಮಡುಕ್ಕನಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಜೋಮೋನ್ ಪುತ್ತನ್ ಪುರಕಲ್ ಅವರು ಈ ಪ್ರಕರಣವನ್ನು ಕೋರ್ಟಿಗೆ ಮನವಿ ಮಾಡಿದ್ದರು. ನಂತರ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿತ್ತು. ಆದರೆ ಕ್ರೈಂ ಬ್ರಾಂಚ್‌ ಪೊಲೀಸರು ಕೂಡಾ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಷರಾ ಹಾಕಿದರು. 1993 ಮಾರ್ಚ್ 29ಕ್ಕೆ ತನಿಖೆಯನ್ನು ಸಿಬಿಐ ವಹಿಸಿಕೊಂಡಿತು.

CBI court pronounces verdict in the sister Abhaya murder case

ಫಾದರ್ ಥಾಮಸ್ ಎಂ.ಕೊಟ್ಟೂರ್( ಆರೋಪಿ 1), ಫಾದರ್ ಜೋಸ್ ಪೂತೃಕ್ಕಯಿಲ್, ಸಿಸ್ಟರ್ ಸೆಫಿ ಬಂಧಿಸಲಾಯಿತು. ಆದರೆ, ಎಲ್ಲರಿಗೂ ಜಾಮೀನು ಸಿಕ್ಕಿತ್ತು. 2018ರಲ್ಲಿ ಫಾದರ್ ಜೋಸ್ ಪೂತೃಕ್ಕಯಿಲ್ ಪ್ರಕರಣದಿಂದ ಖುಲಾಸೆಗೊಂಡಿದ್ದರು.

1992ರ ಮಾರ್ಚ್ 27ರಂದು ಕಾನ್ವೆಂಟ್ ರೂಮೊಂದರಲ್ಲಿ ಸಿಸ್ಟರ್ ಸೆಫಿ ಹಾಗೂ ಥಾಮಸ್ ಎಂ.ಕೊಟ್ಟೂರ್ ಇಬ್ಬರು ಅಪ್ಪಿಕೊಂಡು ಮುದ್ದಾಡುತ್ತಿದ್ದನ್ನು ಸಿಸ್ಟರ್ ಅಭಯಾ ಅಕಸ್ಮಾತ್ ನೋಡಿದ್ದಾರೆ. ನಂತರ ಕೊಟ್ಟೂರ್, ಜೋಸ್ ಹಾಗೂ ಸೆಫಿ ಸೇರಿಕೊಂಡು ಅಭಯಾರನ್ನು ಕೊಚ್ಚಿ ಕೊಂದು, ಬಾವಿಗೆ ಎಸೆಯಲಾಗಿತ್ತು ಎಂದು ಸಿಬಿಐ ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿತ್ತು.

English summary
Kerala: CBI court pronounces verdict in the sister Abhaya murder case; holds both accused Fr Thomas Kottoor & nun Sr Sephy as guilty. Quantum of punishment to be pronounced on December 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X