• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಗೀತಗಾರ ಬಾಲಭಾಸ್ಕರ್ ಸಾವು ಪ್ರಕರಣ ಸಿಬಿಐ ತನಿಖೆಗೆ

|

ತಿರುವನಂತಪುರಂ, ಜುಲೈ 31: ಸತತ 7 ದಿನಗಳ ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟಿದ್ದ ಗಾಯಕ, ಪಿಟೀಲುವಾದಕ, ಸಂಗೀತಗಾರ ಬಾಲಭಾಸ್ಕರ್(40) ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.

2018ರ ಈ ಅಪಘಾತ ಪ್ರಕರಣದ ಬಗ್ಗೆ ಅನೇಕ ಸಂಶಯಗಳು ಕೇಳಿ ಬಂದಿತ್ತು. ಅಭಿಮಾನಿಗಳು ಹಲವು ಸಂಘಟನೆಗಳು ಈ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸುವಂತೆ ಕೇರಳ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ, ಈ ಪ್ರಕರಣವನ್ನು ಸಿಬಿಐಗೆ ನೀಡುತ್ತಿರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಬಾಲಭಾಸ್ಕರ್ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದ ಸಂಗೀತ ಪ್ರೇಮಿಗಳು

ಸೆಪ್ಟೆಂಬರ್ 25, 2018ರಂದು ತಿರುವನಂತಪುರಂ ಹೆದ್ದಾರಿಯ ಪಕ್ಕದಲ್ಲಿದ್ದ ಮರವೊಂದಕ್ಕೆ ಬಾಲಭಾಸ್ಕರ್ ಅವರ ಕುಟುಂಬವಿದ್ದ ಕಾರು ಅಪ್ಪಳಿಸಿತ್ತು. ಈ ದುರ್ಘಟನೆಯಲ್ಲಿ ಬಾಲಭಾಸ್ಕರ್, ಬಾಲಭಾಸ್ಕರ್ ಅವರ ಪತ್ನಿ ಲಕ್ಷ್ಮಿ, ಕಾರು ಚಾಲಕ ಅರ್ಜುನ್ ಅವರಿಗೆ ತೀವ್ರ ಗಾಯಗಳಾಗಿತ್ತು. ದಂಪತಿಯ ಎರಡು ವರ್ಷ ವಯಸ್ಸಿನ ಮಗು ತೇಜಸ್ವಿನಿ ಮೃತಪಟ್ಟಿದ್ದಳು.

ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ ಬರುತ್ತಿದ್ದರು

ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ ಬರುತ್ತಿದ್ದರು

ಬಾಲಭಾಸ್ಕರ್ ಅವರು ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ, ವಾಪಸ್ ಬರುವಾಗ ಈ ದುರ್ಘಟನೆ ನಡೆದಿತ್ತು. ಮುಂಜಾನೆ ನಿದ್ರೆ ರಹಿತ ಪಯಣದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಮಂಗಳಾಪುರಂ ಪೊಲೀಸರು ಹೇಳಿದ್ದಾರೆ.

12 ವರ್ಷ ವಯಸ್ಸಿನಿಂದಲೇ ಸಂಗೀತ ಕ್ಷೇತ್ರದಲ್ಲಿ ಮಿಂಚಿದ್ದ ಬಾಲ ಭಾಸ್ಕರ್ ಅವರು, ಮಾಂಗಲ್ಯ ಪಲ್ಲಕ್ಕು ಎಂಬ ಮಲಯಾಳಂ ಸಿನಿಮಾಕ್ಕೆ ತಮ್ಮ 17ನೇ ವಯಸ್ಸಿನಲ್ಲೆ ಸಂಗೀತ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಬಾಲಭಾಸ್ಕರ್ ಅವರ ಫ್ಯೂಷನ್ ಸಂಗೀತಕ್ಕೆ ಸಾಕಷ್ಟು ಅಭಿಮಾನಿಗಳು ಹುಟ್ಟುಕೊಂಡಿದ್ದರು.

ಬಾಲಪ್ರತಿಭೆಯಾಗಿ ಬೆಳಕಿಗೆ ಬಂದವರು

ಬಾಲಪ್ರತಿಭೆಯಾಗಿ ಬೆಳಕಿಗೆ ಬಂದವರು

17ನೇ ವಯಸ್ಸಿಗೆ ಸ್ವತಂತ್ರವಾಗಿ ಸಿನಿಮಾವೊಂದಕ್ಕೆ ಸಂಗೀತ ನಿರ್ದೇಶನ ಮಾಡಿದ ಬಾಲಭಾಸ್ಕರ್ ಅವರು ಬಾಲಪ್ರತಿಭೆಯಾಗಿ ಬೆಳಕಿಗೆ ಬಂದವರು. ಡಾ. ಕೆ.ಜೆ ಯೇಸುದಾಸ್, ಹರಿಹರನ್, ಸುರೇಶ್ ವಾಡ್ಕರ್, ಕೆಎಸ್ ಚಿತ್ರಾ, ಸುಜಾತಾ, ಶ್ರೀನಿವಾಸ್, ಕಾರ್ತಿಕ್, ವಿಜಯ್ ಪ್ರಕಾಶ್ ಸೇರಿದಂತೆ ಹತ್ತು ಹಲವು ಸಂಗೀತ ದಿಗ್ಗಜರು, ಸಂಗೀತಗಾರರ ಜತೆ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದರು.

ಕೊಡಗು ಸಂತ್ರಸ್ತರ ನೆರವಿಗೆ ಸ್ಪಂದಿಸಿದ್ದರು

ಕೊಡಗು ಸಂತ್ರಸ್ತರ ನೆರವಿಗೆ ಸ್ಪಂದಿಸಿದ್ದರು

ಜಲ ಪ್ರಳಯದಿಂದ ತತ್ತರಿಸಿರುವ ಕೇರಳ ಕೊಡಗು ಸಂತ್ರಸ್ತರ ನೆರವಿಗೆ ಸ್ಪಂದಿಸಿದ್ದ ಬಾಲಭಾಸ್ಕರ್ ಅವರು ವಿವಿಧೆಡೆ ಸಂಗೀತ ಕಾರ್ಯಕ್ರಮ ಆಯೋಜನೆಗೆ ಮುಂದಾಗಿದ್ದರು. ವಿಸ್ಮಯಂ ಎಂಬ ಹೆಸರಿನಲ್ಲಿ ಮ್ಯೂಸಿಕ್ ಫ್ಯೂಷನ್ ಕಾರ್ಯಕ್ರಮವನ್ನು ವಿಕೆ ಕನ್ವೆಂನ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು. ಸಂತ್ರಸ್ತ ನೆರವಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದರು.

ವೈವಿಧ್ಯಮಯ ಆಲ್ಬಂಗಳನ್ನು ಹೊರತಂದಿದ್ದರು

ವೈವಿಧ್ಯಮಯ ಆಲ್ಬಂಗಳನ್ನು ಹೊರತಂದಿದ್ದರು

ಬಾಲ ಪ್ರತಿಭೆ ಬಾಲಭಾಸ್ಕರ್ ಅವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿಯಿಂದ ಪಿಟೀಲು ವಾದನಕ್ಕಾಗಿ ಬಿಸ್ಮಿಲ್ಲಾ ಖಾನ್ ಯುವ ಸಂಗೀತಗಾರ ಪುರಸ್ಕಾರ ಲಭಿಸಿತ್ತು. ಗಾಯಕ, ಪೀಟಲು ವಾದಕ, ಸಂಗೀತ ಸಂಯೋಜಕರಾಗಿ ಫ್ಯೂಷನ್ ಸಂಗೀತವನ್ನು ಹೆಚ್ಚೆಚ್ಚು ಜನಪ್ರಿಯಗೊಳಿಸಲು ಮನಸ್ಸು ಮಾಡಿದರು. ಅನೇಕ ಕೀರ್ತನೆಗಳು, ಸಂಸ್ಕೃತ ಭಾಷಾ ಪ್ರಚಾರ, ರಾಕ್, ಜಾಜ್, ಹಿಪ್ ಹಾಪ್ ಸಂಗೀತ ಹೀಗೆ ವೈವಿಧ್ಯಮಯ ಆಲ್ಬಂಗಳನ್ನು ಹೊರತಂದಿದ್ದರು.

ದುರಂತ ಅಂತ್ಯ ಕಂಡಿದ್ದ ಬಾಲಭಾಸ್ಕರ್

ದುರಂತ ಅಂತ್ಯ ಕಂಡಿದ್ದ ಬಾಲಭಾಸ್ಕರ್

ಸಿಕೆ ಉನ್ನಿ ಹಾಗೂ ಶಾಂತಕುಮಾರಿ ಅವರ ಪುತ್ರನಾಗಿ ಜನಿಸಿದ ಬಾಲಭಾಸ್ಕರ್ ಅವರು ತಮ್ಮ ಬಹುಕಾಲದ ಗೆಳತಿ ಲಕ್ಷ್ಮಿಯನ್ನು 2000ರಲ್ಲಿ ಮದುವೆಯಾಗಿದ್ದರು. ದೀರ್ಘಕಾಲದ ನಂತರ 2016ರಲ್ಲಿ ಹೆಣ್ಣು ಮಗು ಜನಿಸಿತ್ತು. ಆದರೆ, ಸೆಪ್ಟೆಂಬರ್ 25, 2018ರ ದುರಂತದಲ್ಲಿ ಅಪ್ಪ-ಮಗಳು ಮೃತರಾಗಿದ್ದು, ಲಕ್ಷ್ಮಿ ಸೇರಿದಂತೆ ಕುಟುಂಬವರ್ಗ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಬಾಲಭಾಸ್ಕರ್ ಅವರು ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ, ವಾಪಸ್ ಬರುವಾಗ ಈ ದುರ್ಘಟನೆ ನಡೆದಿತ್ತು. ಮುಂಜಾನೆ ನಿದ್ರೆ ರಹಿತ ಪಯಣದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಮಂಗಳಾಪುರಂ ಪೊಲೀಸರು ಹೇಳಿದ್ದರು.

English summary
Kerala Government hands over the death case of musician Balabhaskar (in file pic) to Central Bureau of Investigation (CBI). Balabhaskar and his two-year-old daughter had died on September 25, 2018 in a car accident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X