ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಮತ್ತೆ ನಿಪಾ ವೈರಸ್‌ನಿಂದ ಸಾವು; ಎಚ್ಚರಿಕೆ ಗಂಟೆ

|
Google Oneindia Kannada News

ತಿರುವನಂತಪುರಂ, ಸೆಪ್ಟೆಂಬರ್ 5: ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ 12 ವರ್ಷ ವಯಸ್ಸಿನ ಬಾಲಕ ಮೃತಪಟ್ಟಿರುವುದನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ. ಇದಾದ ಬಳಿಕ ಕೇಂದ್ರದಿಂದ ತಂಡವೊಂದು ಕೋಯಿಕ್ಕಾಡ್ ಕಡೆಗೆ ಧಾವಿಸಿದೆ.

ಬಾಲಕನ ಸ್ಯಾಂಪಲ್‌ಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್ ಗೆ ಕಳಿಸಲಾಗಿತ್ತು. ಕೇಂದ್ರದ ರೋಗ ನಿಯಂತ್ರಕ ತಂಡವೊಂದು ಭಾನುವಾರ ತಲುಪಲಿದ್ದು, ತಾಂತ್ರಿಕ ಸಲಹೆ ನೀಡಲಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಸಚಿವೆ ವೀಣಾ, ''ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾನೆ, ಶನಿವಾರ ರಾತ್ರಿ ವಿಷಮ ಪರಿಸ್ಥಿತಿಯಲ್ಲಿದ್ದ ಬಾಲಕನಿಗೆ ಉತ್ತಮ ಚಿಕಿತ್ಸೆ ನೀಡಲಾಗಿತ್ತು, ಆದರೆ, ದುರದೃಷ್ಟವಶಾತ್ ಉಳಿಸಿಕೊಳ್ಳಲಾಗಲಿಲ್ಲ, ವೈರಸ್ ಸೋಂಕು ಹರಡದಂತೆ ಬೇಕಾದ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದ್ದು, ತಜ್ಞ ವೈದ್ಯರ ವಿಶೇಷ ತಂಡವನ್ನು ರಚಿಸಲಾಗಿದೆ. ಬಾಲಕನ ಜೊತೆ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕಿಸಲಾಗಿದ್ದು, ತೀವ್ರ ನಿಗಾವಹಿಸಲಾಗಿದೆ, ಕೇಂದ್ರದ ತಂಡ ನೀಡುವ ಸಲಹೆಯನ್ನು ಮುಂದಿನ ಕ್ರಮ ಜರುಗಿಸಲಾಗುವುದು,'' ಎಂದಿದ್ದಾರೆ.

ಬಾಲಕಿಗೆ ತಗುಲಿರುವ ಸೋಂಕು ದೃಢಪಡಿಸಿಕೊಳ್ಳಲು ಪ್ಲಾಸ್ಮಾ, ಸಿಎಸ್ ಎಫ್ ಹಾಗೂ ಸೆರಂ ಸ್ಯಾಂಪಲ್ ಗಳನ್ನು ಪುಣೆ ಎನ್ಐವಿಗೆ ಕಳಿಸಲಾಗಿತ್ತು. ಶನಿವಾರ ರಾತ್ರಿ ನಿಫಾ ವೈರಸ್ ಪಾಸಿಟಿವ್ ಎಂದು ಬಂದಿತ್ತು. ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಿಸಲಾಯಿತು, ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.

ನಿಪಾಹ್/ನಿಫಾ ವೈರಸ್ ಎಂದರೇನು?

ನಿಪಾಹ್/ನಿಫಾ ವೈರಸ್ ಎಂದರೇನು?

ನಿಪಾಹ್ ಝೂನೋಸಿಸ್ ಮಾದರಿಯ ವೈರಾಣಾಗಿದ್ದು, ಇದು ಮನುಷ್ಯ ಮತ್ತು ಪ್ರಾಣಿಗಳಲ್ಲಿ ಹಲವು ಬಗೆಯ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.

ಎನ್‌ಸಿಫಾಲಿಟಿಸ್‌-ಇನ್‌ಡ್ಯೂಸಡ್‌ ಮಯೋಕಾರ್ಡಿಟಿಸ್‌ (ಎನ್‌ಇಎಂ) ಮಾದರಿಯ ವೈರಸ್ ಆಗಿರುವ ನಿಪಾಹ್, ಹೆಂಡ್ರಾ ವೈರಾಣುವನ್ನೇ ಹೋಲುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದರು. ಅಂದೇ ವೈದ್ಯರು ಈ ವೈರಾಣು, ಹಂದಿ, ಕೋಳಿಯಂತಹ ಮಾಂಸಾಹಾರದಿಂದ ಈ ವೈರಾಣು ಹರಡಲ್ಪಡುತ್ತದೆ ಎಂದು ಶಂಕಿಸಿದ್ದರು.

ವೈರಸ್ ಹರಡುವುದು ಹೇಗೆ?

ವೈರಸ್ ಹರಡುವುದು ಹೇಗೆ?

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್‌ ಬ್ಯಾಟ್ಸ್‌) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ. ಅಂತೆಯೇ ಪ್ರಾಣಿ ಇಲ್ಲವೇ ಪಕ್ಷಿಗಳಿಂದಲೂ ಇದು ಹರಡುವ ಸಾಧ್ಯತೆ ಇದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಈ ನಿಪಾಹ್ ವೈರಾಣು ಮೂಲಸ್ಥಾನ ಪ್ಟೆರೋಪೋಡಿಡೇ ಬಾವಲಿ ಕುಟುಂಬ ಎನ್ನಲಾಗಿದೆ. ಈ ಜಾತಿಯ ಬಾವಲಿಗಳ ಮುಖಾಂತರ ಈ ಮಾರಕ ವೈರಾಣು ಹರಡುತ್ತಿದೆ. ಈ ಜಾತಿಯ ಬಾವಲಿಗಳು ತಿಂದು ಬಿಸಾಡಿದ ಅಥವಾ ಈ ಬಾವಲಿಗಳ ಜೊಲ್ಲು, ಮೂತ್ರ ಬಿದ್ದ ವಸ್ತುಗಳ ಸ್ಪರ್ಶವಾದರೆ ಈ ಸೋಂಕು ಹರಡುವ ಸಾಧ್ಯತೆ ಇದೆ.

ಇನ್ನೂ ಲಸಿಕೆ ಕಂಡು ಹಿಡಿದಿಲ್ಲ

ಇನ್ನೂ ಲಸಿಕೆ ಕಂಡು ಹಿಡಿದಿಲ್ಲ

ಈ ನಿಪಾಹ್ ವೈರಾಣು 1998ರಲ್ಲೇ ಪತ್ತೆಯಾಗಿದ್ದರೂ, ಈ ವೈರಾಣುವಿಗೆ ಈ ವರೆಗೂ ಲಸಿಕೆಯನ್ನೇ ಕಂಡು ಹಿಡಿಯಲಾಗಿಲ್ಲ. ಮಾರಣಾಂತಿಕ ಕಾಯಿಲೆಗಳನ್ನು ತರಬಲ್ಲ ನಿಪಾಹ್ ವೈರಾಣುವಿಗೆ ಲಸಿಕೆ ತಯಾರಿಸಲು ಸಾಕಷ್ಟು ವೈದ್ಯಕೀಯ ಸಂಸ್ಥೆಗಳು ಸಂಶೋಧನೆ ನಡೆಸುತ್ತಿವೆಯಾದರೂ ಲಸಿಕೆ ಮಾತ್ರ ಇನ್ನೂ ಕಂಡುಹಿಡಿಯಲಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳ ಪ್ರಕಾರ ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆಯಿಲ್ಲ ಎನ್ನಲಾಗಿದೆ.

ರೋಗ ಲಕ್ಷಣಗಳೇನು?

ರೋಗ ಲಕ್ಷಣಗಳೇನು?

ನಿಪಾಹ್ ಸೋಂಕು ನಮ್ಮನ್ನು ಆವರಿಸಿದರೆ, ಮೊದಲಿಗೆ ಅದು ಮೆದುಳಿನ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ. ಆರಂಭಲ್ಲಿ ಮೆದುಳಿನ ನರಮಂಡಲದ ಮೇಲೆ ದಾಳಿ ಮಾಡುವ ವೈರಾಣು ಪತ್ತೆಯಾಗಲು 5 ರಿಂದ 14 ದಿನಗಳೇ ಬೇಕಾಗುತ್ತದೆ.

ಸಾಮಾನ್ಯ ಜ್ವರ, ವಿಪರೀತ ತಲೆನೋವು, ಅತಿಯಾದ ಆಯಾಸ, ಅತಿಯಾದ ನಿದ್ರಾಹೀನತೆ, ದಿಗ್ಭ್ರಮೆ ಮತ್ತು ಮಾನಸಿಕ ಗೊಂದಲ ಈ ಸೋಂಕಿನ ಲಕ್ಷಣಗಳಾಗಿವೆ. ಕೆಲ ಪ್ರಕರಣಗಳಲ್ಲಿ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿದೆ. ಈ ಸೋಂಕು ಎಷ್ಟು ಮಾರಕ ಎಂದರೆ, ಕೇವಲ 24 ರಿಂದ 48 ಗಂಟೆಗಳಲ್ಲೇ ಸೋಂಕು ಪೀಡಿತ ವ್ಯಕ್ತಿ ಕೋಮಾಗೆ ಜಾರುವ ಅಪಾಯವಿದೆ. ಅಲ್ಲದೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಾಣಿಗಳಿಗೂ ಭೀತಿ

ಪ್ರಾಣಿಗಳಿಗೂ ಭೀತಿ

ಈ ವೈರಸ್‌ ಮನುಷ್ಯರಿಗಷ್ಟೇ ಅಲ್ಲದೆ ಹಂದಿಗಳಿಗಳು ಹಾಗೂ ಇನ್ನಿತರೆ ಸಾಕು ಪ್ರಾಣಿಗಳಿಗೆ ಹರಡಬಲ್ಲದು. ನಿಪಾಹ್ ದಿಂದ ದೂರವಿರಲು ಹೀಗಿರಬೇಕು: ಯಾವುದೇ ರೀತಿಯ ಸೋಂಕುಗಳಾದರೂ ಅದರ ನಿರ್ಮೂಲನೆ ಅಥವಾ ನಿಯಂತ್ರಣ ಮನಷ್ಯನ ರೋಗ ನಿರೋಧಕ ಸಾಮರ್ಥ್ಯದ ಮೇಲೆ ಆಧಾರಿತವಾಗಿರುತ್ತದೆ. ಹೀಗಾಗಿ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಆಹಾರ ಪದಾರ್ಥಗಳು, ಡಯಟ್ ಗಳನ್ನು ಪಾಲಿಸುವುದು ಉತ್ತಮ. ಅಲ್ಲದೆ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಹರ್ಬಲ್ ಟೀ (ಗಿಡಮೂಲಿಕಾ ಚಹಾ) ಅಥವಾ ವಿವಿಧ ಬಗೆಯ ಕಷಾಯಗಳನ್ನು ಆಗಾಗ ಸೇವಿಸುತ್ತಿರಬೇಕು.

ಎಚ್ಚರಿಕೆಯಿಂದಿರಿ

ಎಚ್ಚರಿಕೆಯಿಂದಿರಿ

ಕೋಯಿಕ್ಕಾಡ್ ಜಿಲ್ಲೆಯ ಬಾಲಕಿಗೆ ಈ ವೈರಸ್ ತಗುಲಿರುವುದು ಪತ್ತೆಯಾಗುತ್ತಿದ್ದಂತೆ ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲೂ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಬಾಲಕನ ಸಂಬಂಧಿಕರು, ಸ್ನೇಹಿತರು ಹಾಗೂ ಇನ್ನಿತರರನ್ನು ತಕ್ಷಣವೇ ಪರೀಕ್ಷೆಗೊಳಪಟ್ಟು, ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆಯ ವಿಶೇಷ ತಂಡ ಈ ಬಗ್ಗೆ ನಿಗಾವಹಿಸಿದ್ದು, ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಗುರುತಿಸಿ, ಚಿಕಿತ್ಸೆಗೊಳಪಡುವಂತೆ ನಿರ್ದೇಶನ ನೀಡಲಾಗಿದೆ. ಮೃತ ಬಾಲಕನ ಅಂತ್ಯಕ್ರಿಯೆಯನ್ನು ಮಾರ್ಗಸೂಚಿಯಂತೆ ಭಾನುವಾರವೇ ನೆರವೇರಿಸಲಾಗುತ್ತದೆ. 2018ರ ಮೇ 19ರಂದು ಕೇರಳದ ಇದೇ ಜಿಲ್ಲೆಯಲ್ಲಿ ಕಾಣಿಸಿಕೊಂಡ ನಿಫಾ ವೈರಸ್ 17 ಜನರನ್ನು ಬಲಿ ತೆಗೆದುಕೊಂಡಿತ್ತು. 2018ರ ಜೂನ್ 1ರಂತೆ 18 ಮಂದಿಗೆ ಮತ್ತೆ ಸೋಂಕು ದೃಢಪಟ್ಟಿತ್ತು.

ಕೇರಳದ ಗಡಿ ಭಾಗದಲ್ಲೂ ಎಚ್ಚರಿಕೆ

ಕೇರಳದ ಗಡಿ ಭಾಗದಲ್ಲೂ ಎಚ್ಚರಿಕೆ

ಈ ಹಿಂದೆ ಈ ವೈರಸ್ ಸೋಂಕು ಕಂಡು ಬಂದಾಗ ಕರ್ನಾಟಕದ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿತ್ತು. ಸದ್ಯಕ್ಕೆ ಕೇರಳದ ಮೂರು ಜಿಲ್ಲೆಗಳಲ್ಲಿ ಮಾತ್ರ ಎಚ್ಚರಿಕೆ ಗಂಟೆ ಬಾರಿಸಲಾಗಿದೆ.

* ಶಂಕಿತ ಸೋಂಕಿತರು ಮನೆಯಲ್ಲಿದ್ದರೆ ಅವರನ್ನು ಪ್ರತ್ಯೇಕವಾಗಿರಿಸಿ
* ರೋಗಿಗಳು ಬಳಸುವ ವಸ್ತುಗಳನ್ನು ಪ್ರತ್ಯೇಕವಾಗಿ ಸಾಬೂನು, ನೀರು ಬಳಸಿ ಶುಚಿಗೊಳಿಸಿ
* ಕೈಕುಲುಕುವುದನ್ನು ತಪ್ಪಿಸಿ ಹಾಗೂ ಸೋಂಕಿತ ಜನರ ಸಂಪರ್ಕಕ್ಕೆ ಬಂದ ನಂತರ ಕೈಗಳನ್ನು ತೊಳೆದುಕೊಳ್ಳಿ.
* ಎಲ್ಲಾ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಅಥವಾ ಬೇಯಿಸಿ ತಿನ್ನಿ
* ರೋಗಿಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಗ್ಲೌಸ್ ತಪ್ಪದೇ ಬಳಸಿ
* ಜ್ವರದ ಲಕ್ಷಣಗಳು ಕಂಡುಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ
* ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 104ಕ್ಕೆ ಕರೆ ಮಾಡಿ

English summary
A 12-year-old boy died due to Nipah virus infection at a hospital in Kerala, state Health Minister Veena George said on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X